ಯುಎಇ ಅಜ್ಮಾನ್ ಮಾರ್ಕೆಟ್‌ನಲ್ಲಿ ಭಾರಿ ಬೆಂಕಿ ಅವಘಡ

ದುಬೈ, ಆಗಸ್ಟ್ 6: ಬೈರುತ್ ಸ್ಫೋಟದ ಆಘಾತದಿಂದಲೇ ಇನ್ನು ಹೊರಬಂದಿಲ್ಲ. ಇದೀಗ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅಜ್ಮಾನ್ ಮಾರುಕಟ್ಟೆಯಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ.

ದುಬೈನಿಂದ ಸುಮಾರು 50 ಕಿ.ಮೀ ದೂರದಲ್ಲಿ ಆಗಸ್ಟ್ 5ರ ಸಂಜೆ ಸುಮಾರು 6.30ರ ಸಮಯಕ್ಕೆ ಈ ಅನಾಹುತ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಅಂದ್ರೆ ಈ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ.

ಬೆಂಕಿ ಅವಘಡದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ, ಈ ಅಪಘಾತಕ್ಕೆ ನಿಖರವಾದ ಕಾರಣ ತಿಳಿದಿಲ್ಲ.

Fire Breaks Out In Uae’s Ajman Market

ಸುಮಾರು ಮೂರು ಗಂಟೆಗಳ ಕಾಲ ಬೆಂಕಿ ನಂದಿಸುವ ಕಾರ್ಯ ನಡೆದಿದೆ ಹಾಗೂ ಮಾರುಕಟ್ಟೆಯ ಇನ್ನು ಕೆಲವಡೆ ಕೂಲಿಂಗ್ ಕೆಲಸ ಮಾಡಲಾಗುತ್ತಿದೆ.

ಬೈರುತ್ ದುರ್ಘಟನೆ

ಎರಡು ದಿನಗಳ ಹಿಂದೆಯಷ್ಟೇ ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ಭೀಕರ ಸ್ಫೋಟ ಸಂಭವಿಸಿ 113 ಮಂದಿ ಮೃತಪಟ್ಟಿದ್ದರು. 4000ಕ್ಕೂ ಅಧಿಕ ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಇನ್ನು ಸುಮಾರು ಜನರು ನಾಪತ್ತೆಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+