ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದುಬೈನಲ್ಲಿ 'ನೀಟ್' ವೈದ್ಯಕೀಯ ಪ್ರವೇಶ ಪರೀಕ್ಷೆ ಕೇಂದ್ರ ಆರಂಭ

|
Google Oneindia Kannada News

ನವದೆಹಲಿ, ಜುಲೈ 23: ದುಬೈನಲ್ಲಿ ಈ ವರ್ಷದಿಂದ ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಕೇಂದ್ರವನ್ನು ಸ್ಥಾಪನೆ ಮಾಡುವುದಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿದೆ.

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಕುವೈಟ್ ನಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ನೀಟ್ ಪರೀಕ್ಷಾ ಕೇಂದ್ರದ ಜೊತೆಗೆ ಈ ವರ್ಷ ದುಬೈ ನಲ್ಲಿ ಮತ್ತೊಂದು ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೆಚ್ ಆರ್ ಡಿ ಕಾರ್ಯದರ್ಶಿ ಅಮಿತ್ ಖರೆ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

NEET PG ಪರೀಕ್ಷೆ 2021; ಸೆಪ್ಟೆಂಬರ್ 11ಕ್ಕೆ ದಿನಾಂಕ ನಿಗದಿNEET PG ಪರೀಕ್ಷೆ 2021; ಸೆಪ್ಟೆಂಬರ್ 11ಕ್ಕೆ ದಿನಾಂಕ ನಿಗದಿ

ಮಧ್ಯಪ್ರಾಚ್ಯದಲ್ಲಿ ಭಾರತೀಯ ವಿದ್ಯಾರ್ಥಿ ಸಮುದಾಯಕ್ಕೆ ಸಹಕಾರಿಯಾಗುವುದಕ್ಕೆ ಇದೇ ಮೊದಲ ಬಾರಿಗೆ ಕುವೈಟ್ ನಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ಈ ತಿಂಗಳ ಪ್ರಾರಂಭದಲ್ಲಿ ಸಚಿವಾಲಯ ಹೇಳಿತ್ತು.

Medical Entrance Exam NEET To Have Centre In Dubai This Year

ಭಾಷೆಗಳನ್ನು ಪಂಜಾಬಿ ಹಾಗೂ ಮಲಯಾಳಂ ಎರಡು ಹೊಸ ಭಾಷೆಗಳಾಗಿವೆ. ಆಗಸ್ಟ್ 1 ಕ್ಕೆ ನಿಗದಿಯಾಗಿದ್ದ ಪರೀಕ್ಷೆಗಳು ಸೆಪ್ಟೆಂಬರ್ 12 ಕ್ಕೆ ಮುಂದೂಡಲಾಗಿದೆ. ಪರೀಕ್ಷೆಗಳನ್ನು ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಏರಿಕೆ ಮಾಡಲಾಗಿದೆ. 2020 ರಲ್ಲಿ 3,862 ಇದ್ದ ಪರೀಕ್ಷಾ ಕೇಂದ್ರಗಳನ್ನೂ ಈ ಬಾರಿ ಏರಿಕೆ ಮಾಡಲಾಗಿದೆ.

ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯ ಸಮುದಾಯಕ್ಕೆ ಈ ಬಗ್ಗೆ ಈ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಪರೀಕ್ಷೆಗಳನ್ನು ಈ ವರ್ಷ ಹಿಂದಿ, ಪಂಜಾಬಿ, ಅಸ್ಸಾಮಿ, ಬೆಂಗಾಳಿ, ಒಡಿಯಾ, ಗುಜರಾತ್, ಮರಾಠಿ, ತೆಲುಗು, ಮಲಯಾಳಂ, ಕನ್ನಡ, ತಮಿಳು, ಉರ್ದು ಹಾಗೂ ಇಂಗ್ಲಿಷ್, ಉರ್ದು ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಡೆಯುವ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ -ನೀಟ್ ಪಿಜಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಇದೇ ಸೆಪ್ಟೆಂಬರ್ 11ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಮುನ್ನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏಪ್ರಿಲ್ 18ರಂದು ನೀಟ್ ಪರೀಕ್ಷೆ ನಿಗದಿಯಾಗಿತ್ತು. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಮುಂದೂಡಿತ್ತು. ಇದೀಗ ಇದೀಗ ಸೆಪ್ಟೆಂಬರ್ 11ಕ್ಕೆ ಪರೀಕ್ಷೆ ದಿನಾಂಕ ನಿಗದಿಗೊಳಿಸಲಾಗಿದೆ.

English summary
The Ministry of Education has decided to add a centre in Dubai for the medical entrance exam NEET this year, officials said Thursday. Earlier this month, the ministry had announced that for the first time the exam will be conducted in Kuwait to facilitate the Indian student community in the Middle East.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X