ಮೋದಿಗೆ ಅರಬ್ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ
ದುಬೈ, ಆಗಸ್ಟ್ 24: ಪ್ರಧಾನಿ ನರೇಂದ್ರ ಮೋದಿಗೆ ಯುನೈಟೆಡ್ ಅರಬ್ ಎಮರೈಟ್ಸ್ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಹಲವು ದೇಶಗಳ ಪ್ರವಾಸದಲ್ಲಿರುವ ಮೋದಿ ಅವರು ಇಂದು ಯುಎಇಗೆ ಭೇಟಿ ನೀಡಿದ್ದಾರೆ. ಈ ಸಮಯದಲ್ಲಿ ಯುಎಇ ರಾಜ ಮೊಹಮ್ಮದ್ ಬಿನ್ ಜಯೇದ್ ಅಲ್ ನಹ್ಯಾನ್ ಅವರನ್ನು ಇಂದು ಭೇಟಿ ಮಾಡಿದರು. ಈ ಸಮಯದಲ್ಲಿ ಮೋದಿ ಅವರಿಗೆ ಯುಎಇಯ ಅತ್ಯುತ್ತಮ ನಾಗರೀಕ ಪ್ರಶಸ್ತಿ 'ಆರ್ಡರ್ ಆಫ್ ಜಯೇದ್' ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಯುಎಇಯ ಅಧ್ಯಕ್ಷರ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಅವರು ಗೌರವ ಪ್ರಧಾನ ಮಾಡಲಾಯಿತು.
ಇದೇ ಸಮಯದಲ್ಲಿ ಮಹಾತ್ಮಾ ಗಾಂಧಿ ಅವರ 150ನೇ ಜಯಂತಿಯ ಸ್ಮರಣಾರ್ಥ ಮಹಾತ್ಮ ಗಾಂಧಿ ಚಿತ್ರವುಳ್ಳ ಸ್ಟಾಂಪ್ ಒಂದನ್ನು ಸಹ ನೀಡಲಾಯಿತು.