ಸೌದಿ ಅರೆಬಿಯಾ: ಭೀಕರ ರಸ್ತೆ ಅಪಘಾತದಲ್ಲಿ 35 ವಿದೇಶಿಗರು ಸಾವು
ದುಬೈ, ಅಕ್ಟೋಬರ್ 17: ಸೌದಿ ಅರೆಬಿಯಾದ ಮದಿನಾ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 35 ಮಂದಿ ಸಾವನ್ನಪ್ಪಿದ್ದಾರೆ.
ಸ್ಥಳೀಯ ಕಾಲಮಾನ ಬುಧವಾರ ಸಂಜೆ 7 ಗಂಟೆ ವೇಳೆಗೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಮತ್ತು ಭಾರಿ ವಾಹನ ಕ್ಕೆ ಢಿಕ್ಕಿ ಹೊಡೆದ ಪರಿಣಾಮ 35 ಮಂದಿ ವಿದೇಶಿಯರು ಮೃತಪಟ್ಟಿದ್ದಾರೆ.
ಸೌದಿ ಅರೆಬಿಯಾದ ಮೆದಿನಾ ಪ್ರದೇಶದಲ್ಲಿ ಘಟನೆ ನಡೆದಿದ್ದು ವಿದೇಶಿಗರೇ ಹೆಚ್ಚಿಗಿದ್ದ ಖಾಸಗಿ ಬಸ್ ಸರಕು ಸಾಗಣೆಯ ದೊಡ್ಡ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರಲ್ಲಿ ಏಷ್ಯಾದವರು ಮತ್ತು ಅರನ್ ರಾಷ್ಟ್ರದವರು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ ಗೊತ್ತಾಗಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸತ್ತವರ ಗುರುತು ಇನ್ನೂ ಬಹಿರಂಗ ಪಡಿಸಿಲ್ಲ.