• search
 • Live TV
ದುಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದುಬೈ ಕನ್ನಡಿಗರ ಜೊತೆ ಸುಧಾಮೂರ್ತಿ ರಾಜ್ಯೋತ್ಸವ ಆಚರಣೆ

|
   Sudha Murty will be Chief guest for 64th Kannada Rajyothsava | Oneindia Kannada

   ಅನಿವಾಸಿ ಕನ್ನಡಿಗರು ಕರ್ನಾಟಕದ ನಾಡ ಹಬ್ಬ 'ಕನ್ನಡ ರಾಜ್ಯೋತ್ಸವ' ವನ್ನು ಸಂಭ್ರಮದಿಂದ ಆಚರಿಸುತ್ತಾರೆ. ದುಬೈನಲ್ಲಿರುವ ಕನ್ನಡಿಗರು ಈ ಬಾರಿ ನವೆಂಬರ್ 08ರಂದು 64ನೇ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಮುಖ್ಯ ಅತಿಥಿಗಳಾಗಿರುತ್ತಾರೆ.

   ನವೆಂಬರ್ 08ರಂದು ಸಂಜೆ 5 ಗಂಟೆಗೆ ದುಬೈ ಮೇದಾನ್ ನಾದ್ ಅಲ್ ಶೀಬಾದಲ್ಲಿರುವ ಹಾರ್ಟ್ ಲ್ಯಾಂಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕನ್ನಡಿಗರು ಒಟ್ಟುಗೂಡಿ ನಾಡಹಬ್ಬ ಆಚರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತೆ ಸುಧಾಮೂರ್ತಿ ಅವರಿಗೆ 2019ನೇ ಸಾಲಿನ 'ಕನ್ನಡ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

   ದುಬೈನಲ್ಲಿ ಭಾರತದ ರಾಯಭಾರಿ ವಿಪುಲ್ ಅವರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಗಿಲ್ 1999ರ ಯುದ್ಧದಲ್ಲಿ ಸೆಣೆಸಿದ ಸೇನಾಧಿಕಾರಿ ಕ್ಯಾಪ್ಟನ್ ನವೀನ್ ನಾಗಪ್ಪ ಅವರು ಅತಿಥಿಗಳಾಗಿದ್ದಾರೆ.

   ಬೆಂಗಳೂರಿನ ನೃತ್ಯ ದಿಶಾ ಫೌಂಡೇಶನ್ ಸಂಸ್ಥೆಯಿಂದ ಭಾರತದ ಸಾಂಸ್ಕೃತಿಕ, ಶ್ರೀಮಂತ ಪರಂಪರೆಯನ್ನು ಬಿಂಬಿಸುವ ವಿಶಿಷ್ಟ ನೃತ್ಯ ರೂಪಕವನ್ನು ಪ್ರಸ್ತುತಪಡಿಸಲಾಗುತ್ತದೆ. ಇದರ ಜೊತೆಗೆ ಸ್ಥಳೀಯ ಕಲಾವಿದರು ತಮ್ಮ ಪ್ರತಿಭಾ ಪ್ರದರ್ಶನ ಮಾಡಲಿದ್ದಾರೆ.

   ಕಾರ್ಯಕ್ರಮದ ನಿರೂಪಣೆಯನ್ನು ಆರ್ ಜೆ ಸಿರಿ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದೆ ಎಂದು ಕನ್ನಡಿಗರು ದುಬೈ ಸಂಘದ ಮುಖ್ಯ ಸಂಚಾಲಕ ಮಲ್ಲಿಕಾರ್ಜುನ ಗೌಡ ಅವರು ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.

   English summary
   Sudha Murty, Chairperson of Infosys Foundation will be Chief guest for 64th Kannada Rajyothsava 2019 celebration organised by Kannadigaru Dubai on Friday 8th November 2019, 5.00 PM at Hart land International School, Naad Al Sheeba, Maydan Dubai.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
   X