ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ನಿಧನ

|
Google Oneindia Kannada News

ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ, ಮೇ 13 ರಂದು ನಿಧನರಾದರು ಎಂದು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ. "ಯುಎಇ ಅಧ್ಯಕ್ಷರಾದ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನದ ಬಗ್ಗೆ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಯುಎಇ, ಅರಬ್ ಮತ್ತು ಇಸ್ಲಾಮಿಕ್ ರಾಷ್ಟ್ರ ಮತ್ತು ಪ್ರಪಂಚದ ಜನರೊಂದಿಗೆ ಸಂತಾಪ ವ್ಯಕ್ತಪಡಿಸುತ್ತದೆ" ಎಂದು ವಾಮ್ ಹೇಳಿಕೆಯಲ್ಲಿ ತಿಳಿಸಲಾಗಿದೆ.

UAE President Sheikh Khalifa bin Zayed passes away

ಶೇಖ್ ಖಲೀಫಾ ಅವರು ಯುಎಇ ಅಧ್ಯಕ್ಷರಾಗಿ ಮತ್ತು ಅಬುಧಾಬಿಯ ಆಡಳಿತಗಾರರಾಗಿ ನವೆಂಬರ್ 3, 2004 ರಿಂದ ಸೇವೆ ಸಲ್ಲಿಸಿದರು. ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಹಿಸ್ ಹೈನೆಸ್ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕಾಗಿ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ.

Recommended Video

Virat Kohli ಪಂದ್ಯ ಮುಗಿದಾಗ ಕಂಡುಬಂದಿದ್ದು ಹೀಗೆ | Oneindia Kannada

ಅವರು ತಮ್ಮ ತಂದೆಯ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದರು. ದಿವಂಗತ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್, ಅವರು 1971 ರಲ್ಲಿ ಒಕ್ಕೂಟದಿಂದ ಯುಎಇಯ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, 2004ರ ನವೆಂಬರ್ 2 ರಂದು ನಿಧನರಾಗಿದ್ದರು. ಧ್ವಜಗಳನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ಸಚಿವಾಲಯಗಳು, ಇಲಾಖೆಗಳು, ಫೆಡರಲ್ ಮತ್ತು ಸ್ಥಳೀಯ ಸಂಸ್ಥೆಗಳು ಇಂದಿನಿಂದ ಕೆಲಸವನ್ನು ಸ್ಥಗಿತಗೊಳಿಸುತ್ತವೆ ಎನ್ನಲಾಗಿದೆ.

English summary
UAE President and ruler of Abu Dhabi Sheikh Khalifa bin Zayed Al Nahyan passed away on Friday, local reports quoting the Ministry of Presidential Affairs said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X