ನಿಧಿ ಪತ್ತೆ ಬಳಿಕ ಐತಿಹಾಸಿಕ ಲಕ್ಕುಂಡಿಯಲ್ಲಿ ಏನಾಗುತ್ತಿದೆ? ಸಚಿವ ಎಚ್.ಕೆ.ಪಾಟೀಲ್ ಮಹತ್ವದ ಮಾಹಿತಿ
ಲಕ್ಕುಂಡಿ, ಜನವರಿ 19: ಗದಗ ಜಿಲ್ಲೆಯ ಐತಿಹಾಸಿಕ ತಾಣ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾದ ಘಟನೆ ದೇಶಾದ್ಯಂತ ಗಮನ ಸೆಳೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ಮಾತನಾಡಿದ್ದಾರೆ. ಹಾಗಾದ್ರೆ ಏನೆಲ್ಲಾ ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗದಗ ಜಿಲ್ಲೆಯ ಲಕ್ಕುಂಡಿ ಪಟ್ಟಣದ ಸಮೀಪದ ಪ್ರದೇಶದಲ್ಲಿ ಭೂಮಿ ಅಗೆಯುವ ವೇಳೆ ಹಳೆಯ ಕಾಲದ ನಾಣ್ಯಗಳು ಹಾಗೂ ಲೋಹದ ವಸ್ತುಗಳು ಪತ್ತೆಯಾಗಿವೆ ಎನ್ನಲಾಗಿದೆ. ಈ ಪ್ರದೇಶವು ಈಗಾಗಲೇ ಚಾಲುಕ್ಯರ ಕಾಲದ ಐತಿಹಾಸಿಕ ಕೇಂದ್ರವಾಗಿದ್ದು, ದೇವಸ್ಥಾನಗಳು, ಶಾಸನಗಳು ಮತ್ತು ಕೆರೆಗಳಿಗಾಗಿ ಪ್ರಸಿದ್ಧವಾಗಿದೆ. ಪತ್ತೆಯಾದ ನಿಧಿ ಕೂಡ ಚಾಲುಕ್ಯ ಯುಗಕ್ಕೆ ಸೇರಿದದ್ದು ಇರಬಹುದು ಎಂದು ಪುರಾತತ್ವ ತಜ್ಞರು ಶಂಕಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿಧಿಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದಿದ್ದಾರೆ. ಈ ನಿಧಿ ಲಕ್ಕುಂಡಿಯ ಇತಿಹಾಸ, ಆ ಕಾಲದ ಆರ್ಥಿಕ ವ್ಯವಸ್ಥೆ ಮತ್ತು ನಾಣ್ಯ ಬಳಕೆಯ ಕುರಿತು ಸಾರಿ ಹೇಳುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಎಚ್.ಕೆ.ಪಾಟೀಲ್ ಹೇಳಿದ್ದೇನು?: ಐತಿಹಾಸಿಕ ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆ ಮಾಡಲಾಗುತ್ತಿದೆ. ಈ ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿವೆ. ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯ ಆಗಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು.
ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ, ಉತ್ಖನನ ಪ್ರಗತಿ ಬಗ್ಗೆ ಸಚಿವ ಹೆಚ್.ಕೆ ಪಾಟೀಲ್ ಅವರು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಭೆಯಲ್ಲಿ ಪ್ರಜ್ವಲ್ ರಿತ್ತಿಗೆ ಸಿಕ್ಕ ನಿಧಿ ಬಗ್ಗೆಯೂ ವಿಶೇಷವಾಗಿ ಚರ್ಚೆ ನಡೆಸಲಾಯಿತು. ಆ ಕುಟುಂಬಕ್ಕೆ ಏನೆಲ್ಲಾ ಸಹಾಯ ಮಾಡಬೇಕೆಂದು ಚರ್ಚೆ ನಡೆಸಲಾಗಿದೆ. ಲಕ್ಕುಂಡಿಯಲ್ಲಿನ ಬಯಲು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ 165 ಲಕ್ಷ ಬಿಡುಗಡೆ ಮಾಡಲಾಗಿದೆ. ಮೂರು ಹೆಕ್ಟೇರ್ ಭೂಮಿ ಪಡೆದುಕೊಳ್ಳಲು ನಿರ್ಧಾರ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.
ಇಲ್ಲಿನ ತಾಣಗಳನ್ನು ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಜೊತೆಗೆ ಇನ್ನು 28 ದೇವಸ್ಥಾನ, ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಣೆ ಮಾಡುತ್ತೇವೆ. ಇದರಿಂದಾಗಿ ಒಟ್ಟು 44 ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿದ್ದು, ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯ ಆಗಲಿದೆ ಎಂದು ಹೇಳಿದರು.
ಫೆಬ್ರವರಿ ಅಂತ್ಯದಲ್ಲಿ ಈ ಪ್ರಕ್ರಿಯೆ ಪೂರ್ಣ ಆಗಲಿದೆ. ತಿಂಗಳೊಳಗೆ ಪ್ರಸ್ತಾವನೆ ಕಳುಹಿಸಲು ಸೂಚನೆ ನೀಡಲಾಗಿದೆ. 6 ದೇವಸ್ಥಾನಗಳ ಅಭಿವೃದ್ಧಿಗೆ 10,00,00,000 ರೂಪಾಯಿ ಬಿಡುಗಡೆ ಮಾಡಲಾಗಿದೆ. ಲಕ್ಕುಂಡಿಯಲ್ಲಿ ಹುದುಗಿರುವ ದೇಗುಲಗಳಲ್ಲಿ ಉತ್ಖನನಕ್ಕೂ ಕ್ರಮವಹಿಸಲಾಗುತ್ತಿದೆ. ಮಾರ್ಚ್‌ನೊಳಗಾಗಿ ದೇವಸ್ಥಾನಗಳಲ್ಲಿ ಉತ್ಖನನ ಮಾಡಲಾಗುತ್ತದೆ ಎಂದು ಹೇಳಿದರು.
ಭೂಮಿ ಅಗೆಯುವಾಗ ಚಿನ್ನ ಪತ್ತೆ: ಲಕ್ಕುಂಡಿ ಪಟ್ಟಣದಲ್ಲಿ ಮನೆ ಕಟ್ಟಲು ಭೂಮಿ ಅಗೆಯುತ್ತಿದ್ದ ವೇಳೆ ಬಟ್ಟಲು ಹಾಗು ತಾಮ್ರದ ಪಾತ್ರೆಯೊಳಗೆ ಸುಮಾರು 470 ಗ್ರಾಂ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ ಚಿನ್ನದ ಹಾರ, ಉಂಗುರ ಸೇರಿದಂತೆ ಇತರೆ ವಸ್ತುಗಳು ಇದ್ದವು. ಈ ಘಟನೆ ಬರೀ ಕರ್ನಾಟಕ ಅಷ್ಟೇ ಅಲ್ಲದೆ, ದೇಶಾದ್ಯಂತ ಸದ್ದು ಮಾಡಿದೆ. ನಿಧಿ ಪತ್ತೆ ಮಾಡಿರುವುದು ಸ್ಥಳೀಯ 8ನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ಎಂಬುವರ ಕುಟುಂಬ. ಅವರು ಪ್ರಾಮಾಣಿಕವಾಗಿ ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಬಳಿಕ ಆರ್ಕಿಯಾಲಾಜಿಕಲ್ ಸರ್ವೇಯ್ ಆಫ್ ಇಂಡಿಯಾ (ASI) ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ, ಈ ವಸ್ತುಗಳನ್ನು ಪ್ರಾಚೀನ ಕಾಲದ ಖಜಾನೆ ಎಂದು ಹೇಳಿದ್ದಾರೆ ಮತ್ತು ಇವು ಪುರಾತನ ಕಾಲದ ಆಭರಣ ಆಗಿರಬಹುದು ಎಂದು ಹೇಳಿದ್ದಾರೆ. ಇದೀಗ ಸದ್ಯ ಎಲ್ಲಾ ವಸ್ತುಗಳನ್ನು ಸರ್ಕಾರ ಸುರಕ್ಷಿತವಾಗಿ ವಶಕ್ಕೆ ಪಡೆದಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ











Click it and Unblock the Notifications