ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗದಗ ನಗರಾಭಿವೃದ್ಧಿ ಅಧಿಕಾರಿ ರುದ್ರೇಶ್​ ಮನೆ ಮೇಲೆ ಎಸಿಬಿ ದಾಳಿ

By Lekhaka
|
Google Oneindia Kannada News

ಗದಗ, ಅಕ್ಟೋಬರ್ 22: ಗದಗದಲ್ಲಿ ಇಂದು ಬೆಳಿಗ್ಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ್​ ಅವರ‌ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರುದ್ರೇಶ್ ಅವರಿಗೆ ಸಂಬಂಧಿಸಿದ ಮೂರು ಜಾಗಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ., ನಗರದ ನೌಕರರ ಭವನ ಬಳಿಯ ಕ್ವಾಟ್ರಸ್​, ಜಿಲ್ಲಾಡಳಿತ ಭವನದ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆಯ ಆಪ್ತ ಸಹಾಯಕ ಎಸಿಬಿ ಬಲೆಗೆಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆಯ ಆಪ್ತ ಸಹಾಯಕ ಎಸಿಬಿ ಬಲೆಗೆ

ಅಧಿಕಾರಿ ಎಸ್.ಎನ್.ರುದ್ರೇಶ್​​ ಆದಾಯಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಮಾಹಿತಿ ಇದೆ. ಅಧಿಕಾರಿ‌ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ, 1.50 ಲಕ್ಷ ನಗದು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸಿಬಿ ಡಿವೈಎಸ್ಪಿ ಮಹಾಂತೇಶ, ಗದಗ ಸಿಪಿಐ ವೈ.ಎಸ್.ಧರಣಾಯಿಕ್, ಸಿಪಿಐ ಸುನೀಲ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

Gadag: ACB Raid On Urban Development Cell Planning Director Rudresh House

Recommended Video

Mohammed Siraj ಬೆಳೆದು ಬಂದ ಹಾದಿ , ಹಾಗು IPLಗೆ ಪ್ರವೇಶ ಹೇಗಿತ್ತು | Oneindia Kannada

ಗದಗ ಡಿವೈಎಸ್​​ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿಕ್ಕಜಾಜೂರಿನ ಮನೆ ಹಾಗೂ ಫಾರ್ಮ್‌ ಹೌಸ್ ಮೇಲೆ ದಾಳಿ ಮಾಡಲಾಗಿದೆ. ಒಟ್ಟು ಮೂರು ತಂಡಗಳು ಮೂರು ಕಡೆಗಳಲ್ಲಿ ದಾಳಿ ನಡೆಸಿವೆ.

English summary
ACB raid on Urban Development cell's Planning director SN Rudresh's house in Gadag and Chikkajajur on today morning
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X