ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಡಿಯುವ ನೀರಿಗಾಗಿ ದೊಂಬಿ: ಗದಗ ಗ್ರಾಪಂ ಸದಸ್ಯರಿಗೆ ದಿಗ್ಬಂಧನ

By Nayana
|
Google Oneindia Kannada News

ಗದಗ, ಆಗಸ್ಟ್ 6: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದ್ದಕ್ಕೆ ಗ್ರಾಮ ಪಂಚಾಯ್ತಿ ಸದಸ್ಯರನ್ನು ಕಚೇರಿಯಲ್ಲಿ ಕೂಡಿ ಹಾಕಿ ಪ್ರತಿಭಟನೆ ಮಾಡಿದ ಘಟನೆ ಗದಗದಲ್ಲಿ ಸೋಮವಾರ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ 1, 2 ರೂ.ಗೆ ಕುಡಿಯುವ ನೀರುಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ 1, 2 ರೂ.ಗೆ ಕುಡಿಯುವ ನೀರು

ಜೂನ್‌ನಿಂದ ರಾಜ್ಯದ ಹಲವಾರು ಭಾಗಗಳಲ್ಲಿ ಮಳೆಯಾದರೂ ಕೂಡ ಗದಗ ಸುತ್ತಮುತ್ತಲ ಪ್ರದೇಶದಲ್ಲಿ ಸಾಕಷ್ಟು ಮಳೆಯಾಗಿಲ್ಲ, ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಸ್ಥಳೀಯ ಮುಖಂಡರನ್ನು ಎಷ್ಟೇ ಬೇಡಿಕೊಂಡರೂ ಪ್ರಯೋಜನವಾಗಿಲ್ಲ.

Angry villagers house arrested GP members for drinking water

ಹಾಗಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಸದಸ್ಯರನ್ನು ಕಚೇರಿಯಲ್ಲಿ ಕೂಡಿ ಹಾಕಿ ಪ್ರತಿಭಟನೆ ಮಾಡುತ್ತಿದ್ದಾರೆ, ಇದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಲಕ್ಕಲಟ್ಟಿಯಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಕಚೇರಿ ಮುಂಭಾಗ ಗಾಂಧೀ ಫೋಟೊ, ಖಾಲಿ ಕೊಡ ಹಾಗೂ ಟೈರ್‌ಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ ಆಗಮಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

English summary
Hundreds of villagers in Lakkalatti village in Laxmeshwar taluk of Gadag district and urged for minimum drinking water supply in the village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X