ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗದಗ : ಲೋಕಸಭಾ ಚುನಾವಣೆ ಸಮಯದಲ್ಲಿ ಬಿಜೆಪಿಗೆ ಹಿನ್ನಡೆ!

|
Google Oneindia Kannada News

Recommended Video

Lok Sabha Elections 2019: ಚುನಾವಣೆ ಸಮಯದಲ್ಲಿ ಗದಗದಲ್ಲಿ ಬಿಜೆಪಿಗೆ ಹಿನ್ನಡೆ ಸಾಧ್ಯತೆ | Oneindia Kannada

ಗದಗ, ಏಪ್ರಿಲ್ 08 : ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಆಪ್ತರಾದ ಶ್ರೀಶೈಲಪ್ಪ ಬಿದರೂರ ಕಾಂಗ್ರೆಸ್ ಸೇರಲಿದ್ದಾರೆಯೇ?. ಹಾವೇರಿ-ಗದಗ ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಾಗ ಈ ಪ್ರಶ್ನೆ ಹುಟ್ಟಿಕೊಂಡಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶ್ರೀಶೈಲಪ್ಪ ಬಿದರೂರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಶ್ರೀಶೈಲಪ್ಪ ಬಿದರೂರ

ಶ್ರೀಶೈಲಪ್ಪ ಬಿದರೂರ ಅವರು ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಭೇಟಿ ಬಳಿಕ ಅವರು ಅಂತಿಮ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರ ಪರಿಚಯಹಾವೇರಿ-ಗದಗ ಲೋಕಸಭಾ ಕ್ಷೇತ್ರ ಪರಿಚಯ

ಗದಗ ಕ್ಷೇತ್ರದ ಮಾಜಿ ಶಾಸಕ, ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಶ್ರೀಶೈಲಪ್ಪ ಬಿದರೂರ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅವರು ಬಿಜೆಪಿ ತೊರೆದರೆ ಗದಗ-ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ.

ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಪುಟ

ಏಪ್ರಿಲ್ 23ರಂದು ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯಿಂದ ಹಾಲಿ ಸಂಸದ ಶಿವಕುಮಾರ ಉದಾಸಿ ಅಭ್ಯರ್ಥಿ. ಕಾಂಗ್ರೆಸ್‌-ಜೆಡಿಎಸ್ ಅಭ್ಯರ್ಥಿಯಾಗಿ ಡಿ.ಆರ್.ಪಾಟೀಲ್ ಅವರು ಕಣದಲ್ಲಿದ್ದಾರೆ...

ಆಪರೇಷನ್ ಕಮಲ

ಆಪರೇಷನ್ ಕಮಲ

ಲೋಕಸಭಾ ಚುನಾವಣೆ ಸಮಯದಲ್ಲಿ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಆಪರೇಷನ್ ಕಮಲ ಮಾಡಿದ್ದಾರೆ. ಶ್ರೀಶೈಲಪ್ಪ ಬಿದರೂರ ಅವರು ಎಚ್.ಕೆ.ಪಾಟೀಲ್ ಜೊತೆ ಸಭೆ ನಡೆಸಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಿಂದಾಗಿ ಶ್ರೀಶೈಲಪ್ಪ ಬಿದರೂರ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಸಾಕಷ್ಟು ಪ್ರಭಾವ ಹೊಂದಿದ್ದಾರೆ

ಸಾಕಷ್ಟು ಪ್ರಭಾವ ಹೊಂದಿದ್ದಾರೆ

2018ರ ವಿಧಾನಸಭೆ ಚುನಾವಣೆಯಲ್ಲಿ ಶ್ರೀಶೈಲಪ್ಪ ಬಿದರೂರ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿತ್ತು. ಆದ್ದರಿಂದ, ಅವರು ಚುನಾವಣೆಯಲ್ಲಿ ತಟಸ್ಥರಾಗಿ ಉಳಿದಿದ್ದರು. ಗದಗ ಮತ್ತು ರೋಣ ಕ್ಷೇತ್ರದ ವ್ಯಾಪ್ತಿಯಲ್ಲಿ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದು, ಸಾಕಷ್ಟು ಪ್ರಭಾವ ಇಟ್ಟುಕೊಂಡಿದ್ದಾರೆ.

ಸಿದ್ದರಾಮಯ್ಯ ಭೇಟಿ

ಸಿದ್ದರಾಮಯ್ಯ ಭೇಟಿ

ಎಚ್.ಕೆ.ಪಾಟೀಲ್ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಶ್ರೀಶೈಲಪ್ಪ ಬಿದರೂರ ಅವರು ಬೆಂಗಳೂರಿಗೆ ತೆರಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ. ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಸಂಜೆ ಉಭಯ ನಾಯಕರು ಭೇಟಿಯಾಗುವ ಸಾಧ್ಯತೆ ಇದೆ.

ಬಿಜೆಪಿಗೆ ಹ್ಯಾಟ್ರಿಕ್ ಗೆಲುವಿನ ಉತ್ಸಾಹ

ಬಿಜೆಪಿಗೆ ಹ್ಯಾಟ್ರಿಕ್ ಗೆಲುವಿನ ಉತ್ಸಾಹ

2009 ಮತ್ತು 2014ರ ಚುನಾವಣೆಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಶಿವಕುಮಾರ್ ಉದಾಸಿ ಅವರು ಗೆಲುವು ಸಾಧಿಸಿದ್ದಾರೆ. ಈ ಬಾರಿಯೂ ಅವರೇ ಅಭ್ಯರ್ಥಿಯಾಗಿದ್ದಾರೆ. ಶ್ರೀಶೈಲಪ್ಪ ಬಿದರೂರ ಅವರು ಬಿಜೆಪಿ ತೊರೆದರೆ ಹ್ಯಾಟ್ರಿಕ್ ಗೆಲುವಿನ ಉತ್ಸಾಹದಲ್ಲಿರುವ ಬಿಜೆಪಿಗೆ ಹಿನ್ನಡೆಯಾಗಲಿದೆಯೇ? ಕಾದು ನೋಡಬೇಕಿದೆ.

2014ರ ಫಲಿತಾಂಶ

2014ರ ಫಲಿತಾಂಶ

2009ರಲ್ಲಿ ಮೊದಲ ಬಾರಿಗೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಿತು. ಬಿಜೆಪಿಯ ಶಿವಕುಮಾರ್ ಉದಾಸಿ ಅವರು 430293 ಮತಗಳನ್ನು ಪಡೆದು ಜಯಗಳಿಸಿದ್ದರು. 2014ರ ಚುನಾವಣೆಯಲ್ಲಿ 566790 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಬಾರಿ ಹ್ಯಾಟ್ರಿಕ್ ಗೆಲುವಿನ ಉತ್ಸಾಹದಿಂದ ಅವರು ಕಣಕ್ಕಿಳಿದಿದ್ದು,ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿಯಾಗಿ ಡಿ.ಆರ್.ಪಾಟೀಲ್ ಎದುರಾಳಿಯಾಗಿದ್ದಾರೆ.

English summary
Gadag former BJP MLA and lingayat community leader Shrishailappa Bidarur met the Congress election campaign committee chief H.K.Patil. Shrishailappa Bidarur may join Congress ahead of Lok sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X