ಮಾಜಿ ಸಚಿವ ಹೆಚ್. ಕೆ. ಪಾಟೀಲ್‌ಗೆ ಕೋವಿಡ್ ಸೋಂಕು

ಗದಗ, ಸೆಪ್ಟೆಂಬರ್ 28 : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಹೆಚ್. ಕೆ. ಪಾಟೀಲ್‌ಗೆ ಕೋವಿಡ್ ಸೋಂಕು ತಗುಲಿದೆ. 10 ದಿನಗಳ ಕಾಲ ಅವರು ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿ ಇರಲಿದ್ದಾರೆ.

ಸೋಮವಾರ ಗದಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್. ಕೆ. ಪಾಟೀಲ್ ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಶಾಸಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

"10 ದಿನಗಳ ಕಾಲ ಮನೆಯಲ್ಲೇ ಕ್ವಾರಂಟೈನ್ ಆಗಲಿದ್ದೇನೆ. ನಿಮ್ಮ ಹಾರೈಕೆಯಿಂದ ಬೇಗನೆ ಗುಣಮುಖನಾಗುತ್ತೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ. ಸುರಕ್ಷಿತವಾಗಿರಿ" ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Congress Leader HK Patil Testes Positive For COVID 19

ಆರ್. ವಿ. ದೇಶಪಾಂಡೆ ಟ್ವೀಟ್ : ಹೆಚ್. ಕೆ. ಪಾಟೀಲ್ ಅವರು ಬೇಗ ಗುಣಮುಖರಾಗಲಿ ಎಂದು ಮಾಜಿ ಸಚಿವ ಆರ್. ವಿ. ದೇಶಪಾಂಡೆ ಟ್ವೀಟ್ ಮಾಡಿದ್ದಾರೆ. "ಮಾಜಿ ಸಚಿವರು ಹಾಗೂ ಹಿರಿಯ ಶಾಸಕರಾದ ಶ್ರೀ ಹೆಚ್.ಕೆ.ಪಾಟೀಲ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದು ವಿಷಾದನೀಯ. ಅವರು ಆದಷ್ಟೂ ಶೀಘ್ರವಾಗಿ ಗುಣಮುಖರಾಗಿ, ಜನಸೇವೆಗೆ ಮರಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.

ಹೆಚ್. ಕೆ. ಪಾಟೀಲ್ ಶುಕ್ರವಾರದ ತನಕ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದರು. ಕಾಂಗ್ರೆಸ್ ನಾಯಕರ ಜೊತೆಗಿದ್ದರು. ಕಲಾಪ ಮುಗಿಸಿ ಕ್ಷೇತ್ರಕ್ಕೆ ವಾಪಸ್ ಆದ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಾಗ ವರದಿ ಪಾಸಿಟಿವ್ ಎಂದು ಬಂದಿದೆ.

ಭಾನುವಾರದ ಹೆಲ್ತ್ ಬುಲೆಟಿನ್‌ನಂತೆ ಕರ್ನಾಟಕದಲ್ಲಿ 9543 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 5,75,566. ಭಾನುವಾರ ಗದಗ ಜಿಲ್ಲೆಯಲ್ಲಿ 61 ಹೊಸ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,877.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+