ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಕಾಂಗ್ರೆಸ್ ಬೆಂಬಲ: ಬಸವರಾಜ ಬೊಮ್ಮಾಯಿ ಕಿಡಿ
ಗದಗ, ಏಪ್ರಿಲ್ 24: ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಹೀಗಿದ್ದರೂ ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಧರ್ಮ ಆಧಾರಿತ ಮೀಸಲಾತಿಗೆ ಅವಕಾಶವಿಲ್ಲ ಎಂದು ಅಂತಾರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಆಕ್ಷೇಪ ಎತ್ತಿದೆ. ಈ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲೀಮರಲ್ಲೂ ಚಪ್ಪರಬಂದ್, ನದಾಫ್, ಪಿಂಜಾರ್ ಸೇರಿದಂತೆ 24 ಜಾತಿಯವರು ಬಹಳ ಹಿಂದುಳಿದವರಿದ್ದಾರೆ. ಅವುಗಳಿಗೆ ಈಗಾಗಲೇ 2ಎ ಯಲ್ಲಿ ಮೀಸಲಾತಿ ಇದೆ. ಅವರಿಗೆ ಹೆಚ್ಚುವರಿಯಾಗಿ ಶೇ 4 ಪರ್ಸೆಂಟ್ ಮೀಸಲಾತಿ ಕೊಟ್ಟಿದ್ದರು.

ಇದನ್ನೆ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪ ಮಾಡಿದೆ. ಈಗ ಆ ಕೇಸ್ ಸುಪ್ರೀಂ ಕೋರ್ಟಿನಲ್ಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಮರು ಹಂಚಿಕೆ ಮಾಡುತ್ತಾರೆ ಎನ್ನುವ ಮಾತಿಗೆ ಪ್ರತಿಕ್ರಿಯಿಸಿದ ಅವರು, ಆಸ್ತಿ ಕೇಳುವುದಕ್ಕೆ ಬಹಳ ಚನ್ನಾಗಿ ಅನಿಸುತ್ತದೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ಆಸ್ತಿ ಮಾಡುವ ಹಕ್ಕೂ ಇದೆ
ಕಾಂಗ್ರೆಸ್‌ನವರು ಇವರು ಏನು ಸರ್ವೆ ಮಾಡುತ್ತಾರೆ. ಚುನಾವಣೆ ಸಂದರ್ಭದಲ್ಲಿ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು. ಕಾಂಗ್ರೆಸ್ ನೀತಿ ಇದ್ದಲ್ಲಿ ಸ್ಪಷ್ಟವಾಗಿ ಹೇಳಬೇಕು. ಸಂವಿಧಾನದಲ್ಲಿ ವಾಕ್ ಸ್ವಾತಂತ್ರದ ಹಾಗೆ ಆಸ್ತಿ ಮಾಡುವ ಹಕ್ಕೂ ಇದೆ. ಕಾಂಗ್ರೆಸ್ ನವರು ಸಂವಧಾನದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹೀಗೆ ಮಾತ್ನಾಡಬಾರದು ಎಂದು ತಿಳಿ ಹೇಳಿದರು.

ಹತ್ಯೆ ಪ್ರಕರಣ ಗೌಣ ಮಾಡಲು ಯತ್ನ
ಹುಬ್ಬಳ್ಳಿ ಕಾಲೇಜ್ ಯುವತಿ ನೇಹಾ ಹತ್ಯೆ ಪ್ರಕರಣ ಸಾಮಾನ್ಯ ಎಂಬ ಹೇಳಿಕೆ ಪ್ರಶ್ನೆಗೆ ಬೊಮ್ಮಾಯಿಯವರು ಆಕ್ರೋಶ ಹೊರ ಹಾಕಿದರು. ಸಚಿವ ಸಚಿವ ಶಿವಾನಂದ ಪಾಟೀಲ ಹತ್ಯೆ ಪ್ರಕರಣ ಸಾಮಾನ್ಯ ಎಂಬ ಹೇಳಿಕೆ ಕಾಂಗ್ರೆಸ್ ನ ಮನಸ್ಥಿತಿಯನ್ನು ತೋರಿಸುತ್ತದೆ. ಕೊಲೆ ಮಾಡಿದವ ಅಲ್ಪ ಸಂಖ್ಯಾತನಿದ್ದಾನೆ. ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ಪ್ರಕರಣವನ್ನ ಕಾಂಗ್ರೆಸ್ ನೋಡುತ್ತಿದೆ. ಈ ಪ್ರಕರಣವನ್ನು ಗೌಣ ಮಾಡುವುದಕ್ಕಾಗಿ ಈ ಥರದ ಹೇಳಿಕೆ ನೀಡಲಾಗುತ್ತಿದೆ ಎಂದು ಕಿಡಿ ಕಾರಿದರು.
ಇದು ಸಮಾಜಕ್ಕೆ ಬಹಳ ನೋವುಂಟು ಮಾಡುವ ಕೆಲಸ. ಇಂಥ ಹೇಳಿಕೆ ನೇಹಾ ಕಳೆದುಕೊಂಡು ನೋವಿನಲ್ಲಿರುವ ಕುಟುಂಬಕ್ಕೂ ನೋವು ತರುತ್ತದೆ. ಶಿವಾನಂದ ಪಾಟೀಲ್ ಅವರು ಯಾವಾಗಲೂ ಹೀಗೆ ಮಾತನಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಇಂಥವರೇ ಬೇಕಾಗಿದ್ದಾರೆ ಎಂದರು.
ಇದೇ ವೇಳೆ, ಚೆಂಬು, ಅಕ್ಷಯ ಪಾತ್ರೆಯ ಮಧ್ಯೆ. ಪ್ರಧಾನಿ ನರೇಂದ್ರ ಮೋದಿ ಅವರ ಅಕ್ಷಯ ಪಾತ್ರೆ ಬಗ್ಗೆ ಜನರ ಒಲವಿದೆ ಎಂದು ಹೇಳಿದರು.












Click it and Unblock the Notifications