ವೈರಲ್ ವಿಡಿಯೋ; ಕೋವಿಡ್ ಲಸಿಕೆ ಪಡೆಯುವಂತೆ ಅಜ್ಜನ ಡಂಗುರ
ಗದಗ, ಮಾರ್ಚ್ 14; ಕೋವಿಡ್ ಲಸಿಕೆ ಪಡೆಯುವಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಗಣ್ಯರು ತಾವು ಲಸಿಕೆ ಪಡೆದು, ಲಸಿಕೆ ಸುರಕ್ಷಿತವಾಗಿದೆ ನೀವು ಪಡೆಯಿರಿ ಎಂದು ಜನರಿಗೆ ಕರೆ ನೀಡುತ್ತಿದ್ದಾರೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ವೀರಪ್ಪ ಎನ್ನುವ ವೃದ್ಧ ಡಂಗುರ ಬಾರಿಸುವ ಮೂಲಕ ಕೋವಿಡ್ ಲಸಿಕೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.
ವೀರಪ್ಪ ಡಂಗುರ ಸಾರಿ ಲಸಿಕೆ ಪಡೆಯುವಂತೆ ಕರೆ ನೀಡುವ ವಿಡಿಯೋವನ್ನು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿದ್ದಾರೆ.

"ಗದಗ ಜಿಲ್ಲೆಯ ಜಕ್ಕಲಿ ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ" ಎಂದು ಸಚಿವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಗದಗ ಜಿಲ್ಲೆಯ ಜಕ್ಕಲಿ ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ.
— Dr Sudhakar K (@mla_sudhakar) March 13, 2021
As PM @narendramodi ji said, Covid-19 vaccination drive should become a Janandolan. It's inspiring to see our villages using traditional methods to raise awareness. pic.twitter.com/cbKjJfY5ro
"ಕೋವಿಡ್ ವ್ಯಾಕ್ಸಿನ್ ಅಭಿಯಾನ ಜನಾಂದೋಲನವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಸಂಪ್ರದಾಯಿಕ ವಿಧಾನದ ಮೂಲಕ ಲಸಿಕೆ ಬಗ್ಗೆ ಅರಿವು ಮೂಡಿಸುತ್ತಿರುವುದು ಸ್ಪೂರ್ತಿ ದಾಯಕವಾಗಿದೆ" ಎಂದು ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.












Click it and Unblock the Notifications