ನುಡಿದಂತೆ ನಡೆಯುವ ಕಾಂಗ್ರೆಸ್ಸಿಗೆ ಮತ ಹಾಕಿ : ಎಚ್ಕೆ ಪಾಟೀಲ್

Recommended Video

      ನುಡಿದಂತೆ ನಡೆದುಕೊಂಡ ಕಾಂಗ್ರೆಸ್ ಪಕ್ಷ: Lok Sabha Elections 2019

      ಗದಗ ಏಪ್ರಿಲ್ 22: ಬಹಿರಂಗ ಪ್ರಚಾರದ ಕೊನೆಯ ದಿನವಾದ ಭಾನುವಾರದಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್ ಕೆ ಪಾಟೀಲ ಅವರು ಮೈತ್ರಿ ಅಭ್ಯರ್ಥಿ ಡಿ ಅರ್ ಪಾಟೀಲ್ ಅವರ ಪರ ಬಿರುಸಿನ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಇಂದು ಮನೆ ಮನೆಗೆ ತೆರಳಿ ಮತಯಾಚಿಸಲಿದ್ದು, ಏಪ್ರಿಲ್ 23ರಂದು ಈ ಕ್ಷೇತ್ರ ಸೇರಿ 14 ರಾಜ್ಯದ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

      ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

      ಬೆಟಗೇರಿಯ ನರಸಾಪುರ ಆಶ್ರಯ ಕಾಲೋನಿಯಿಂದ ಟೆಂಗಿನಕಾಯಿ ಬಜಾರವರೆಗೆ ರೋಡ್ ಶೋ ನಲ್ಲಿ ಪಾಲ್ಗೊಂಡಿದ್ದರು. ನಂತರ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ನಿವೇಶನ ರಹಿತ ಸಂಘದ ಸದಸ್ಯರ ಸಭೆಯಲ್ಲಿ ಮಾತನಾಡಿದರು. ನಂತರ, ಸಂಜೆ ಗದಗ ಜಿಲ್ಲೆ ಸ್ವಸಹಾಯ ಸಂಘದ ಸದಸ್ಯರ ಸಭೆಯಲ್ಲಿ ಭಾಗವಹಿಸಿದರು.

      ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿ ಆರ್ ಪಾಟೀಲ್ ಅವರನ್ನು ಗೆಲ್ಲಿಸಲು ಟೊಂಕ ಕಟ್ಟಿ ನಿಂತಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಚ್ ಕೆ ಪಾಟೀಲ ಅವರು, ಕ್ಷೇತ್ರದ ಉದ್ದಗಲಕ್ಕೂ ಬಿರುಸಿನ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಸರಳ ಸಜ್ಜನ ರಾಜಕಾರಣಿ ಡಿ ಆರ್ ಪಾಟೀಲ್ ಅವರ ಆಯ್ಕೆ ಕ್ಷೇತ್ರದ ಅಭಿವೃದ್ದಿಗೆ ಸಾಕಷ್ಟು ಕೊಡುಗೆಗಳನ್ನು ನೀಡಲಿದೆ ಎಂದರು.

      ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ

      ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ

      ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ಪ್ರಧಾನಿ ಮೋದಿ ಅವರು ದೇಶದ ಮೌಲ್ಯಗಳನ್ನು ಗಾಳಿಗೆ ತೂರುತ್ತಿದ್ದಾರೆ. ಧರ್ಮ ಮತ್ತು ಜಾತಿ ಯ ಆಧಾರದ ಮೇಲೆ ದೇಶವನ್ನು ವಿಭಜನೆ ಮಾಡಲು ಹೊರಟಿದ್ದಾರೆ. ದೇಶದ ಸೈನಿಕರ ಸಮವಸ್ತ್ರ ಧರಿಸಿ ಅದನ್ನು ಚುನವಣಾ ಪ್ರಚಾರಕ್ಕೆ ಬಳಸಿಕೊಳ್ಳುವ ಮೋದಿ ಎಷ್ಟರ ಮಟ್ಟಿಗೆ ದೇಶಪ್ರೇಮಿ ಎಂದು ಪ್ರಶ್ನಿಸಿದರು. ರಾಷ್ಟ್ರಧ್ವಜವನ್ನು ತಮ್ಮ ಚುನಾವಣಾ ಜಾಹೀರಾತಿನಲ್ಲಿ ಬಳಿಕೊಂಡಿರುವ ಭಾರತೀಯ ಜನತಾ ಪಕ್ಷ ದೇಶದ ಜನರನ್ನು ಭಾವೋದ್ರೇಕಗೊಳಿಸಲು ಮುಂದಾಗಿದೆ ಎಂದು ಆರೋಪಿಸಿದರು.

      ಅಭಿವೃದ್ಧಿಗಾಗಿ ಕಾಂಗ್ರೆಸ್ಸಿನಿಂದ ಕೊಡುಗೆ

      ಅಭಿವೃದ್ಧಿಗಾಗಿ ಕಾಂಗ್ರೆಸ್ಸಿನಿಂದ ಕೊಡುಗೆ

      ದೇಶದ ಹಾಗೂ ರಾಜ್ಯದ ಅಭಿವೃದ್ದಿಗೆ ಕಾಂಗ್ರೆಸ್ ಪಕ್ಷ ಬಹಳಷ್ಟು ಕೊಡುಗೆಯನ್ನು ನೀಡಿದೆ. ದೇಶ ಇಂದು ಇಷ್ಟು ಸಧೃಡ ಆರ್ಥಿಕತೆ ಹಾಗೂ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನಮಾನ ಹೊಂದಲು ಕಾಂಗ್ರೆಸ್ ಕೊಡುಗೆ ಅಪಾರ. ಕಳೆದ 5 ವರ್ಷಗಳಲ್ಲಿ ನಿರುದ್ಯೋಗ ಸಮಸ್ಯೆ ಹಾಗೂ ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಆಡಳಿತದಲ್ಲಿ 1.70 ಕೋಟಿ ಉದ್ಯೋಗಗಳು ಮರೆಯಾಗಿವೆ.

      ನುಡಿದಂತೆ ನಡೆಯುವುದು ಕಾಂಗ್ರೆಸ್

      ನುಡಿದಂತೆ ನಡೆಯುವುದು ಕಾಂಗ್ರೆಸ್

      ನುಡಿದಂತೆ ನಡೆಯುವುದು ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವ ಮೂಲಕ ಕೇಂದ್ರ ಸರಕಾರದಲ್ಲಿ ಕಾಂಗ್ರೆಸ್ ಪಕ್ಷದ ಕೈ ಬಲಪಡಿಸುವಂತೆ ಮನವಿ ಮಾಡಿದರು.

      ಬೆಟಗೇರಿಯ ನರಸಾಪುರ ಆಶ್ರಯ ಕಾಲೋನಿಯಿಂದ ಟೆಂಗಿನಕಾಯಿ ಬಜಾರವರೆಗೆ ರೋಡ್ ಶೋ ನಲ್ಲಿ ಸಾಮಾಜಿಕ ಹೋರಾಟಗಾರರಾದ ರಾಜೇಂದ್ರ ಸಿಂಗ್ ಮತ್ತು ರವಿವರ್ಮ ಕುಮಾರ್ ಭಾಗವಹಿಸಿದ್ದರು.

      ನೇಕಾರರಿಗೆ ಭರವಸೆ ನೀಡಿದ ಪಾಟೀಲ್

      ನೇಕಾರರಿಗೆ ಭರವಸೆ ನೀಡಿದ ಪಾಟೀಲ್

      ಬೆಟಗೇರಿಯಲ್ಲಿ ನಡೆದ ನೇಕಾರ ಕಾರ್ಮಿಕರ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿ, ಅಸಂಘಟಿತ ನೇಕಾರರು ಈಗಲೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+