Breaking:ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತರ ಬಲೆಗೆ ಬಿದ್ದ ಅಗ್ನಿಶಾಮಕ ದಳದ ಅಧಿಕಾರಿ

ಗದಗ, ಸೆಪ್ಟೆಂಬರ್ 28: ಶಾಲೆಯ ಕಟ್ಟಡದ ಫಿಟ್ನೆಸ್ ಕುರಿತು ಸುರಕ್ಷತಾ ಪ್ರಮಾಣ ಪತ್ರ ಕೊಡಲು ಲಂಚ ಕೇಳಿದ್ದ ಗದಗದ ಜಿಲ್ಲಾ ಮಟ್ಟದ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಎಸ್ ಎಸ್ ಕೂಡ್ಲಮಠ ಶಾಲೆಯ ಕಟ್ಟಡದ ಗುಣಮಟ್ಟದ ಸುರಕ್ಷತಾ ಪ್ರಮಾಣ ಪತ್ರ ಕೊಡಲು ಏಳು ಸಾವಿರ ಲಂಚ ಕೇಳಿದ ಆರೋಪದಲ್ಲಿ ಅಗ್ನಿಶಾಮಕ ಅಧಿಕಾರಿ ಎನ್‌ಎಸ್‌ ಕಗ್ಗಲಗೌಡರ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಶಾಲೆಯ ಕಟ್ಟಡದ ಫಿಟ್ನೆಸ್ ಕುರಿತು ಸುರಕ್ಷತಾ ಪ್ರಮಾಣ ಪತ್ರಕ್ಕಾಗಿ ತೆರಳಿದ್ದ ಶಾಲೆಯ ಮುಖ್ಯೋಪಾಧ್ಯಾಯ ಸಿ.ಬಿ ಮೊಗಲಿ ಎಂಬುವವರು ಅಧಿಕಾರಿ ಲಂಚ ಕೇಳಿದ್ದರಿಂದ ಲೋಕಾಯುಕ್ತರ ಕಚೇರಿಗೆ ದೂರು ನೀಡಿದ್ದರು. ಇದೀಗ ಬುಧವಾರ ಲಂಚ ಪಡೆಯುವಾಗಲೇ ಎನ್ ಎಸ್ ಕಗ್ಗಲಗೌಡರ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ವಿಚಾರಣೆ ನಡೆಸುತ್ತಿದ್ದಾರೆ.

Fire officer Trapped by Lokayukta while accepting bribe in Gadag

ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ, ಡಿವೈಎಸ್ಪಿ ಶಂಕರ ಎಮ್ ರಾಗಿ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರಗಳಾದ ರವಿ ಪುರುಷೋತ್ತಮ್ ಹಾಗೂ ಆಜೀಜ್ ಕಲಾದಗಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಿಬ್ಬಂದಿಗಳಾದ ವಿರೂಪಾಕ್ಷ ಅರಿಷಿಣದ, ಎಸ್ ಎಸ್ ಅಮರಶೆಟ್ಟಿ, ಮಂಜುನಾಥ್ ಗಾರ್ಗಿ, ಲಕ್ಕನಗೌಡರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+