ಗದಗ ಜಿಲ್ಲೆಯಲ್ಲಿ 2 ಕಮಲ, 2 ಕ್ಷೇತ್ರಗಳು "ಕೈ" ವಶಕ್ಕೆ, ಫಲಿತಂಶದ ವಿವರ ಇಲ್ಲಿದೆ
ಗದಗ, ಮೇ, 14: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಅಭ್ಯರ್ಥಿಗಳ ಹಣೆಬರಹವು ನಿರ್ಧಾರವಾಗಿದೆ. ಹಾಗಾದರೆ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲೂ ಯಾವ ಪಕ್ಷ ಗೆಲುವು ಸಾಧಿಸಿದೆ ಮತ್ತು ಅವರು ಪಡೆದಿರುವ ಮತಗಳು ಎಷ್ಟು ಅನ್ನವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಗದಗ ವಿಧಾನಸಭಾ ಕ್ಷೇತ್ರ
ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಪಾಟೀಲ್ ಅವರು 89,958 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಇವರಿಗೆ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಅನೀಲ್ ಮೆಣಸಿನಕಾಯಿ 74,828 ಮತಗಳನ್ನು ಪಡೆದು ಸೋಲುಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ.ಪಾಟೀಲ್ ಅವರು 15,130 ಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ.

ನರಗುಂದ ವಿಧಾನಸಭಾ ಕ್ಷೇತ್ರ
ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಸಿ.ಪಾಟೀಲ್ 72,835 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಬಿಗ್ ಪೈಟ್ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ 71,044 ಪಡೆದು ಸೋಲನುಭವಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಸಿ.ಸಿ. ಪಾಟೀಲ್ ಅವರು 1,791 ಮತಗಳ ಅಂತರದಲ್ಲಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
ರೋಣ ವಿಧಾನಸಭಾ ಕ್ಷೇತ್ರ
ರೋಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ್ 94,865 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದರೆ, ಇನ್ನು ಭಾರಿ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ 70,175 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ್ ಅವರು 24,690 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರ
ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರು ಲಮಾಣಿ 73,600 ಮತಗಳನ್ನು ಪಡೆಯುವ ಮೂಲಕ 27,963 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನು ಪೈಪೋಟಿ ನೀಡಿದ್ದ ಪಕ್ಷೇತರ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ ಅವರು 45,637 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ ಅವರು 34,550 ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ರೇಷ್ಮೆ ನಾಡಿನಲ್ಲೂ "ಕೈ" ದರ್ಬಾರ್
ಅದೇ ರೀತಿ ರೇಷ್ಮೆನಾಡು ರಾಮನಗರ ಜಿಲ್ಲೆಯ 4 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 3 ಕ್ಷೇತ್ರದಲ್ಲಿ ಗೆದ್ದು ಬೀಗಿದೆ. ಕಳೆದ ಬಾರಿ ಮೂರು ಕ್ಷೇತ್ರಗಳನ್ನು ತೆಕ್ಕೆಗೆ ಪಡೆದಿದ್ದ ಜೆಡಿಎಸ್, ಈ ಬಾರಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟಿದೆ. ಅಲ್ಲದೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕರ್ಮಭೂಮಿ ಎನಿಸಿದ್ದ ರಾಮನಗರ ಕ್ಚೇತ್ರದಲ್ಲಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದಾರೆ. ಅಲ್ಲದೆ ಒಟ್ಟಾರೆ ಕ್ಷೇತ್ರವಾರು ಸೋಲು ಗೆಲುವಿನ ಲೆಕ್ಕಾಚಾರದ ಮಾಹಿತಿ ಇಲ್ಲಿದೆ.
ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಅವರು 94,650 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್.ಎ. ಇಕ್ಬಾಲ್ ಹುಸೇನ್ ಅವರು 87,690 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಅವರು 1,43,023 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ. ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 96,592 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications