ಗದಗ; ಪ್ರವಾಸಿಗರು ಸೋಮವಾರದಿಂದ ಮೃಗಾಲಯ ವೀಕ್ಷಿಸಬಹುದು

ಗದಗ, ಜೂನ್ 07 : ಕರ್ನಾಟಕದಲ್ಲಿ ಸೋಮವಾರದಿಂದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಮೃಗಾಲಯ, ಜೈವಿಕ ಉದ್ಯಾನ, ಪಕ್ಷಿಧಾಮ, ರಾಷ್ಟ್ರೀಯ ಉದ್ಯಾನಗಳು ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿವೆ.

ಕೊರೊನಾ ವೈರಸ್ ಸೋಂಕು ಹಡರದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಕರ್ನಾಟಕ ಸರ್ಕಾರದ ಆದೇಶದಂತೆ ಗದಗ ಮೃಗಾಲಯಕ್ಕೆ ಸಾರ್ವಜನಿಕರ ಭೇಟಿ ನಿಷೇಧಿಸಲಾಗಿತ್ತು. ಜೂನ್ 8ರ ಸೋಮವಾರದಿಂದ ಮೃಗಾಲಯ ಪುನಃ ಬಾಗಿಲು ತೆರೆಯಲಿದೆ.

ಸರ್ಕಾರದ ಮಾರ್ಗಸೂಚಿಗಳ ಅನ್ವಯ ಮೃಗಾಲಯದಲ್ಲಿ ಜನರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಮವಾರದಿಂದ ಮೃಗಾಲಯಕ್ಕೆ ಜನರು ಭೇಟಿ ನೀಡಬಹುದು ಎಂದು ಗದಗ ಜಿಲ್ಲಾಡಳಿತದ ಆದೇಶದಲ್ಲಿ ತಿಳಿಸಲಾಗಿದೆ.

Gadag

ಮೃಗಾಲಯಕ್ಕೆ ಆಗಮಿಸುವ ಜನರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್‌ ಧರಿಸಿರಬೇಕು. ಕೈಗಳ ಸ್ವಚ್ಛತೆಗೆ ಸ್ಯಾನಿಟೈಸರ್ ಬಳಸಬೇಕು. ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದು ಸೂಚನೆ ನೀಡಲಾಗಿದೆ.

"ಪ್ರವಾಸಿಗರ ಸುರಕ್ಷತೆಗಾಗಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಜನರು ಸಹಕಾರ ನೀಡಬೇಕು" ಎಂದು ಗದಗ ಮೃಗಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+