ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗದಗ; ಬೆಣ್ಣೆಹಳ್ಳದ ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಡಿಸಿ

|
Google Oneindia Kannada News

ಗದಗ, ಆಗಸ್ಟ್ 06: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಣ್ಣೆಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನರಗುಂದ ತಾಲೂಕಿನ ಕುರ್ಲಗೇರಿ ಹಾಗೂ ರೋಣ ತಾಲೂಕಿನ ಯಾವಗಲ್ ಗ್ರಾಮಕ್ಕೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನದಿ, ಹಳ್ಳಗಳು ತುಂಬಿ ಹರಿಯುವ ಸಮಯದಲ್ಲಿ ಜನ, ಜಾನುವಾರು ಜೀವಹಾನಿ ತಡೆಗಟ್ಟಲು ಲಭ್ಯವಿರುವ ಬೋಟ್‍ಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು, ಕುಡಿಯುವ ನೀರಿನ ಪೂರೈಕೆ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಔಷಧಿಗಳನ್ನು ಸಂಗ್ರಹಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯಾದ್ಯಂತ ಮಳೆ; ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕೊಟ್ಟ ಸಿಎಂ ರಾಜ್ಯಾದ್ಯಂತ ಮಳೆ; ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕೊಟ್ಟ ಸಿಎಂ

ಪ್ರವಾಹ ಪರಿಸ್ಥಿತಿ ಕುರಿತಂತೆ ನಿಗಾವಹಿಸಲು ಹಿರಿಯ ಅಧಿಕಾರಿಗಳಿಂದ ಹಿಡಿದು ರಕ್ಷಣಾ ತಂಡಗಳವರೆಗಿನ ಸಿಬ್ಬಂದಿಗಳು ಇರುವ ವಾಟ್ಸಪ್ ಗ್ರೂಪ್ ರಚನೆ ಮಾಡಿ ಕಾಲ ಕಾಲಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡಿ ಪರಿಸ್ಥಿತಿ ನಿಭಾಯಿಸಬೇಕು ಎಂದು ನಿರ್ದೇಶನ ನೀಡಲಾಯಿತು.

ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣೆಗೆ ಪ್ರವಾಹ ಭೀತಿಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣೆಗೆ ಪ್ರವಾಹ ಭೀತಿ

Gadag DC Inspects Flood Situation Of Benne Halla

ಪ್ರವಾಹ ಪರಿಸ್ಥಿತಿಯಿಂದಾಗಿ ಜನರನ್ನು ಸ್ಥಳಾಂತರ ಮಾಡಬೇಕಾಗಿ ಬಂದರೆ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಶುದ್ಧ ಕುಡಿಯುವ ನೀರು, ಶೌಚಾಲಯ ಹಾಗೂ ಅಗತ್ಯದ ಔಷಧಿಗಳ ವ್ಯವಸ್ಥೆಗಳನ್ನು ಕೇಂದ್ರದಲ್ಲಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಯಿತು.

ಶಿವಮೊಗ್ಗದಲ್ಲಿನ ಮಳೆ ಪ್ರಮಾಣ; ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟ...ಶಿವಮೊಗ್ಗದಲ್ಲಿನ ಮಳೆ ಪ್ರಮಾಣ; ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟ...

ಮಲಪ್ರಭಾ ನದಿ ಹಾಗೂ ಭದ್ರಾ ಜಲಾಶಯಗಳ ಒಳಹರಿವು ಮತ್ತು ಹೊರ ಹರಿವಿನ ಬಗ್ಗೆ ಅಧೀಕ್ಷಕ ಅಭಿಯಂತರರೊಂದಿಗೆ ನಿರಂತರ ಸಂಪರ್ಕ ಹೊಂದಿರಬೇಕು. ನೀರಿನ ಪ್ರಮಾಣ ತಿಳಿಸಲು ಅಗತ್ಯದ ಸಮನ್ವಯ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

Gadag DC Inspects Flood Situation Of Benne Halla

ಅವಶ್ಯಕ ರಕ್ಷಣಾ ಸಲಕರಣೆಗಳಾದ ಲೈಫ್ ಜಾಕೆಟ್, ರೋಪ್, ಲ್ಯಾಡರ್, ಮುಂತಾದ ಸಲಕರಣೆಗಳನ್ನು ಸಂಬಂಧಿಸಿದ ಇಲಾಖೆಗಳು ಪರಿಸ್ಥಿತಿಗೆ ಅನುಗುಣವಾಗಿ ಸಂಗ್ರಹಿಸಿಟ್ಟುಕೊಳ್ಳಲು ನಿರ್ದೇಶನ ಕೊಟ್ಟರು.

English summary
Gadag deputy commissioner Sundareshbabu visited and inspected the flood situation of the Benne Halla.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X