ಗದಗ ಚುನಾವಣೆ ಫಲಿತಾಂಶ 2023: 13ನೇ ಸುತ್ತಿನ ಬಳಿಕ ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ

ಗದಗ, ಮೇ 13:ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತೆ ಭರ್ಜರಿ ಮುನ್ನಡೆ ಸಾಧಿಸಿದೆ. 13ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಕೆ‌.ಪಾಟೀಲ್ 71994 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ 62119 ಮತಗಳನ್ನು ಪಡೆದಿದ್ದಾರೆ. ಸದ್ಯ 9875 ಮತಗಳಿಂದ ಮುನ್ನಡೆ ಪಡೆದುಕೊಂಡಿದೆ.

ಗದಗ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಮೂಡಿದೆ. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಗದಗ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾ 75.56 ರಷ್ಟು ಮತದಾನವಾಗಿದೆ.

 Gadag Assembly Election Result 2023

ಕಾಂಗ್ರೆಸ್‌ನಿಂದ ಎಚ್‌ಕೆ ಪಾಟೀಲ್ ಸ್ಪರ್ಧೆ ಮಾಡಿದ್ದು, ಬಿಜೆಪಿಯಿಂದ ಅನಿಲ್ ಮೆಣಸಿನಕಾಯಿ ಸ್ಪರ್ಧೆ ಮಾಡಿದ್ದು, ಜೆಡಿಎಸ್‌ನಿಂದ ವೆಂಕನಗೌಡ ಗೋವಿಂದಗೌಡರ ಕಣಕ್ಕಿಳಿದಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹನಮಂತಗೌಡ ಕೃಷ್ಣಗೌಡ ಪಾಟೀಲ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ವಿರುದ್ಧ 1868 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಕಳೆದ ಬಾರಿ ಅತಿ ಕಡಿಮೆ ಮತಗಳ ಅಂತದರಲ್ಲಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಈ ಬಾರಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಗದಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 222569 ಮತದಾರರಿದ್ದಾರೆ. ಇದರಲ್ಲಿ 110331 ಪುರುಷರು ಮತ್ತು 112221 ಮಹಿಳೆಯರು ಇದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+