Heavy Rain: ರಾಜ್ಯದ ಈ ಭಾಗದಲ್ಲಿ ಧಾರಾಕಾರ ಮಳೆ: ಕೃಷಿ ಚಟುವಟಿಕೆ ಚುರುಕು!
Heavy Rain: ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಇದರೊಂದಿಗೆ ಗದಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಿಂದಲೂ ಭಾರೀ ಮಳೆಯಾಗುತ್ತಿದೆ. ಈ ಭಾಗದಲ್ಲಿ ಎರಡರಿಂದ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಗದಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಈ ಭಾಗದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ.
ಗದಗ ಜಿಲ್ಲೆಯ ಹಲವೆಡೆ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಭಾಗದಲ್ಲಿ ಶೆಡ್ ಶೀಟ್‌ಗಳು ಹಾರಿ ಹೋಗಿವೆ. ಕಳೆದ 24 ಗಂಟೆಯ ಅವಧಿಯಲ್ಲಿ ಈ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಹಲವು ಭಾಗದಲ್ಲಿ ಮರಗಳ ಧರೆಗುರುಳಿವೆ. ಜನಜೀವನ ಭಾರೀ ಅಸ್ತವ್ಯಸ್ತವಾಗಿದೆ.

ಇನ್ನೂ ಮೂರು ದಿನ ಮಳೆ: ಮುಂಗಾರು ಪೂರ್ವ ಮಳೆ ಚುರುಕು ಪಡೆದುಕೊಂಡಿದ್ದು, ಅಂದಿನಿಂದ ಕರ್ನಾಟಕದಲ್ಲಿ ಮಳೆ ಜೋರಾಗಿದೆ. ಇದೀಗ ಗದಗ ಜಿಲ್ಲೆಯಲ್ಲಿ ಏಪ್ರಿಲ್ 22ರ ವರೆಗೂ ಮಳೆ ಮುಂದುವರಿಯವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ನೂ ಗದಗದಲ್ಲೂ ಧಾರಾಕಾರ ಮಳೆ ಇರಲಿದೆ ಎಂದು ಹೇಳಲಾಗಿದೆ.
ಗದಗದಲ್ಲಿ ಕೃಷಿ ಚಟುವಟಿಕೆ ಚುರುಕು: ಇನ್ನು ಕಳೆದ ಎರಡು ದಿನಗಳಿಂದ ಗದಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು. ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಉತ್ತಮ ಮಳೆಯಿಂದಾಗಿ ಕೃಷಿ ಚಟುವಟಿಕೆಗೆ ಲಾಭವಾಗಿದೆ. ಮುಂಗಾರು ಹಿನ್ನೆಲೆಯಲ್ಲಿ ಮುಂಗಾರು ಪೂರ್ವವಾಗಿ ಮಾಗಿ ಉಳುಮೆ ಜೋರಾಗಿದೆ. ಈ ಭಾಗದಲ್ಲಿ ರೈತರು ಮಾಗಿ ಉಳುಮೆ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಕೃಷಿ ಚಟುವಟಿಕೆಗಳು ಚುರುಕು ಪಡೆದುಕೊಂಡಿವೆ.
ಇನ್ನು ರಾಜ್ಯದಲ್ಲಿ ನೈಜ ಸಮಯದ ಆಧಾರದ ಮೇಲೆ ಗರಿಷ್ಠ ತಾಪಮಾನವು ಕರಾವಳಿಯಲ್ಲಿ 34 ಡಿಗ್ರಿ ಸೆಲ್ಸಿಯಸ್‌ನಿಂದ 36 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 35ರಿಂದ 38 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ಇರಲಿದೆ. ಇನ್ನು ಬೀದರ್, ವಿಜಯಪುರ, ರಾಯಚೂರು ಹಾಗೂ ಕಲಬುರಗಿ ಭಾಗದಲ್ಲಿ 39 ರಿಂದ 41 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ಭರ್ಜರಿ ಮಳೆ: ಕಳೆದ 24 ಗಂಟೆಯ ಅವಧಿಯಲ್ಲಿ ಗದಗ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ತಿಳಿಸಿದೆ. ಹಾವೇರಿ ಪಿಟಿಒ, ಹಾವೇರಿ ಎಪಿಎಂಸಿ, ಚಿತ್ರದುರ್ಗ ಭಾಗದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಇಳಕಲ್, ತ್ಯಾಗರ್ತಿ ಹಾಗೂ ಅನ್ನವತಿ ಸೇರಿದಂತೆ ವಿವಿಧ ಭಾಗದಲ್ಲಿ ಭರ್ಜರಿ ಮಳೆಯಾಗಿದೆ.












Click it and Unblock the Notifications