ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗದಗ ಜಿಲ್ಲೆಯಲ್ಲಿ ಮನೆಗಳು ಜಲಾವೃತ: ಊಟ ಇಲ್ಲದೇ ಮಹಿಳೆಯರು, ವೃದ್ಧರು ಕಣ್ಣೀರು

By ಗದಗ ಪ್ರತಿನಿಧಿ
|
Google Oneindia Kannada News

ದಗ, ಸೆಪ್ಟೆಂಬರ್‌, 08: ಗದಗದಲ್ಲಿ ಮಳೆರಾಯ ಮತ್ತೆ ಆರ್ಭಟ ಶುರು ಮಾಡಿದ್ದಾನೆ. ಬೆಟಗೇರಿಯಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆ ಸಾಕಷ್ಟು ಅವಾಂತರಗಳನ್ನ ಸೃಷ್ಟಿಸಿದೆ. ಅದರಲ್ಲೂ ಬೆಟಗೇರಿಯ ದೇವರ ದಾಸಿಮಯ್ಯ ವೃತ್ತದ ಬಳಿ ಇರುವ ಸುಮಾರು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆ ಆಗಿವೆ.

ಮನೆಗಳು ಜಲಾವೃತಗೊಂಡ ಪರಿಣಾಮ ಮಹಿಳೆಯರು, ವೃದ್ಧರು ಇಡೀ ರಾತ್ರಿ ಊಟ, ನಿದ್ರೆ ಇಲ್ಲದೇ ಪರಡಾಡಿದ್ದಾರೆ. ರಾತ್ರಿಯಿಡೀ ಮನೆಗೆ ನುಗ್ಗಿದ ಮಳೆ ನೀರನ್ನು ಹೊರಹಾಕಲು ಹರಸಾಹಸ ಪಟ್ಟಿದ್ದಾರೆ. ಸುಮಾರು 8 ಮನೆಗಳು ಬಿದ್ದಿದ್ದು, ವೃದ್ಧ, ದಂಪತಿಗಳಿಬ್ಬರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕುಳಿತುಕೊಳ್ಳು, ಮಲಗಲು, ಅಡುಗೆ ಮಾಡಲು ಜಾಗವಿಲ್ಲದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಡಾ. ಪಂಡಿತ ಪುಟ್ಟರಾಜ್ ಗವಾಯಿಗಳ ಹುಟ್ಟುಹಬ್ಬದ ಪ್ರಯುಕ್ತ ಭಕ್ತರು ಮಾಡಿಸಿದ್ದ, ಪ್ರಸಾದವನ್ನೇ ತಿಂದು ದಿನ ದೂಡಿದ್ದೇವೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಗದಗ; ಮಳೆ ಆರ್ಭಟಕ್ಕೆ 40 ಮನೆಗಳು ಜಲಾವೃತಗದಗ; ಮಳೆ ಆರ್ಭಟಕ್ಕೆ 40 ಮನೆಗಳು ಜಲಾವೃತ

ನಮಗೆ ಸರಿಯಾದ ಮನೆಗಳಿಲ್ಲ. ಇಂದು ನಾಳೆ ಬೀಳುವ ಹಂತದಲ್ಲಿರುವ ಸೋರುವ ಮನೆಯಲ್ಲಿ ವಾಸ ಮಾಡುತ್ತಿದ್ದೇವೆ. ನಮಗೆ ಸರಿಯಾದ ಮೂಲ ಸೌಕರ್ಯಗಳು ಇಲ್ಲ ಎಂದು ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಇಷ್ಟೆಲ್ಲ ಆವಾಂತರ ಸೃಷ್ಟಿ ಆದರೂ ಸಹ ನಗರಸಭೆಯ ಅಧಿಕಾರಿಗಳು ಇದುವರೆಗೂ ಇತ್ತ ತಿರುಗಿ ನೋಡಿಲ್ಲ. ಗಂಜಿ ಕೇಂದ್ರ ತೆರೆದು ಊಟದ ವ್ಯಸ್ಥೆಯನ್ನೂ ಮಾಡಿಲ್ಲ ಎಂದು ಅಲ್ಲಿನ ನಿವಾಸಿಗಳು ಗೋಳಾಡಿದ್ದಾರೆ.

ಆಸ್ಪತ್ರೆಗೆ ದಾಖಲಾದ ಲಾರಿ ಚಾಲಕ

ಆಸ್ಪತ್ರೆಗೆ ದಾಖಲಾದ ಲಾರಿ ಚಾಲಕ

ಗದಗನಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಕ್ಕಿಯಲ್ಲ ರಸ್ತೆ ಪಾಲಾಗಿವೆ. ಗದಗದಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಹೊರಟಿದ್ದ ಲಾರಿ ಲಂಡಿ ಹಳ್ಳದ ಬಳಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಗುದ್ದಿದೆ. ಪರಿಣಾಮ ಲಾರಿಯ ಮುಂದಿನ ಬಂಪರ್ ಜಖಂಗೊಂಡಿದೆ. ಜೊತೆಗೆ ಲಾರಿಯಲ್ಲಿದ್ದ ಅಕ್ಕಿ ಚೀಲಗಳು ನೆಲಕ್ಕೆ ಬಿದ್ದಿದ್ದು, ಅಲ್ಲಿ ಎಲ್ಲ ರಸ್ತೆಯಲ್ಲಿ ಚೆಲ್ಲಾಪಿಲ್ಲಿ ಆಗಿದೆ. ಎದುರಿಗೆ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿದ ಕಾರಣ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಲಾಗಿದೆ. ಇನ್ನು ಲಾರಿ ಚಾಲಕ ಬಸವರಾಜ್ ಕರಕನಗೌಡ ಎಂಬಾತನಿಗೆ ಕಾಲಿಗೆ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಗೋಡೆ ಕುಸಿದು ಮಹಿಳೆ ಸಾವು

ಮನೆಗೋಡೆ ಕುಸಿದು ಮಹಿಳೆ ಸಾವು

ಗದಗನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಳೆ ಮನೆಯ ಗೋಡೆಗಳು ನೆನೆದು ಕುಸಿದು ಬಿದ್ದ ಪರಿಣಾಮ ವೃದ್ಧೆಯೊಬ್ಬಳು.

ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದ ದುರ್ಗಾದೇವಿ ದೇವಸ್ಥಾನದ ಹತ್ತಿರ ಶೆಡ್‌ನಲ್ಲಿ ವಾಸವಿದ್ದ ಲಕ್ಷ್ಮವ್ವ (80) ಎಂಬ ವೃದ್ಧೆ ಮೃತಪಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದರು ಅಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ರೋಣ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಮಣ್ಣಿನಲ್ಲಿ ಸಿಲುಕಿದ್ದ ವೃದ್ಧೆಯ ಮೃತದೇಹವನ್ನು ಹೊರಗಡೆ ತೆಗೆದಿದ್ದಾರೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.
ಜಮೀನುಗಳು ಜಲಾವೃತ, ರೈತರು ಕಂಗಾಲು

ಜಮೀನುಗಳು ಜಲಾವೃತ, ರೈತರು ಕಂಗಾಲು

ಮಲಪ್ರಭಾ ನದಿಯಿಂದ ಅಪಾರ ಪ್ರಮಾಣದ ನೀರು ಹರಿಬಿಡಲಾಗಿದ್ದು, ನರಗುಂದ ಹಾಗೂ ರೋಣ ತಾಲೂಕಿನ ಹಲವಾರು ಹಳ್ಳಿಗಳು ಮುಳಗುಡೆ ಬೀತಿಯಲ್ಲಿವೆ. ಈಗಾಗಲೇ ರೋಣ ತಾಲೂಕಿನ ಹೊಳೆ ಹಡಗಲಿ ಗ್ರಾಮವು ಅರ್ಧಕ್ಕಿಂತ ಹೆಚ್ಚು ಮುಳಗಡೆ ಆಗಿದೆ. ಯಾವುದೇ ದಾರಿಯಿಲ್ಲದೆ ಕೊನೆಗೆ ಗ್ರಾಮಸ್ಥರು ಜಾನುವಾರು ಸಮೇತ ಬೇರೆಡೆಗೆ ವಲಸೆ ಹೋಗಿದ್ದಾರೆ.

ಎಚ್ಚೆತ್ತುಕೊಳ್ಳದ ಗ್ರಾಮಗಳ ಜನರು

ಎಚ್ಚೆತ್ತುಕೊಳ್ಳದ ಗ್ರಾಮಗಳ ಜನರು

ಜಿಲ್ಲಾಡಳಿತ ಮೊದಲೇ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚನೆ ನೀಡಿತ್ತು. ಆದರೂ ಎಚ್ಚೆತ್ತುಕೊಳ್ಳದ ಜನರು, ಮನೆಗಳು ಮುಳುಗಡೆ ಆದ ಮೇಲೆ ಬೇರೆಡೆಗೆ ವಲಸೆ ಹೋಗಿದ್ದಾರೆ. ಇನ್ನು ಜಮೀನುಗಳು ಕೂಡ ಜಲಾವೃತವಾಗಿ ನೂರಾರು ಎಕರೆ ಬೆಳೆಗಳು ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.

English summary
Heavy rains lash across Betageri taluk in Gadag district. Many areas were inundated by water, and more than 50 houses were flooded, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X