ಲೋಕಸಭಾ ಚುನಾವಣೆ : ಜನಾರ್ದನ ರೆಡ್ಡಿಗೆ ಹಿನ್ನಡೆ

ಗದಗ, ಏಪ್ರಿಲ್ 14 : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಹಿನ್ನಡೆಯಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವರು ಸಲ್ಲಿಸಿದ್ದ ಅರ್ಜಿಯನ್ನು ತಹಶೀಲ್ದಾರ್ ತಿರಸ್ಕರಿಸಿದ್ದಾರೆ.

ಜನಾರ್ದನ ರೆಡ್ಡಿ ಅವರು ಗದಗ ಜಿಲ್ಲೆಯಲ್ಲಿ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಅರ್ಜಿ ಸಲ್ಲಿಸಿದ್ದರು. ನಮೂನೆ 6ರ ಅಡಿ ಸಲ್ಲಿಸಿದ್ದ ಅರ್ಜಿಯನ್ನು ಗದಗದ ತಹಶೀಲ್ದಾರ್ ಅವರು ತಿರಸ್ಕಾರ ಮಾಡಿದ್ದಾರೆ.

ಗದಗದಲ್ಲಿ ಬಿ.ಶ್ರೀರಾಮುಲು ಅವರ ನಿವಾಸದಲ್ಲಿ ವಾಸವಾಗಿದ್ದೇನೆ ಎಂದು ಜನಾರ್ದನ ರೆಡ್ಡಿ ಅವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿಯನ್ನು ಸಲ್ಲಿಸಿದ್ದರು. ಏಪ್ರಿಲ್ 23ರಂದು ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ.

Janardhana Reddy application rejected by tahsildar

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದಿರುವ ಜನಾರ್ದನ ರೆಡ್ಡಿ ಅವರು ಬಳ್ಳಾರಿ ಜಿಲ್ಲೆಗೆ ಭೇಟಿ ನೀಡುವಂತಿಲ್ಲ. ಆದ್ದರಿಂದ, ಗದಗದಲ್ಲಿ ವಾಸವಾಗಿದ್ದೇನೆ ಎಂದು ಅವರು ಅಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಬಯಸಿದ್ದರು.

ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣಾ ಪುಟ

ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ. ಬಿಜೆಪಿಯಿಂದ ಶಿವಕುಮಾರ್ ಉದಾಸಿ, ಕಾಂಗ್ರೆಸ್-ಜೆಡಿಎಸ್‌ನಿಂದ ಡಿ.ಆರ್.ಪಾಟೀಲ್ ಅವರು ಕಣದಲ್ಲಿದ್ದಾರೆ. ಜನಾರ್ದನ ರೆಡ್ಡಿ ಅವರು ಎಲ್ಲಿ ಮತದಾನ ಮಾಡಲಿದ್ದಾರೆ? ಎಂಬುದು ಪ್ರಶ್ನೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+