ಮತಯಂತ್ರವನ್ನು ಕತ್ತಲಿನಲ್ಲಿಟ್ಟ ಸಿಬ್ಬಂದಿ: ಚಿಹ್ನೆ ಕಾಣುತ್ತಿಲ್ಲ ಎಂದು ಬಿಜೆಪಿ ಎಲ್‌ಎಲ್‌ಸಿ ಆಕ್ರೋಶ

ಗದಗ, ಮೇ 10: ಕರ್ನಾಟಕ ವಿಧಾನಸಭಾ ಚುನಾವಣೆಗೆ ಗದಗ ಜಿಲ್ಲೆಯಲ್ಲಿ ಭರದಿಂದ ಮತದಾನ ಸಾಗುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯುತ್ತಿದ್ದು, ಮತದಾರರು ಹುರುಪಿನಿಂದಲೇ ಮತ ಚಲಾಯಿಸುತ್ತಿದ್ದಾರೆ.

ಗದಗ ನಗರದ ಮತಗಟ್ಟೆ 56 ಅವ್ಯವಸ್ಥೆಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ನಗರದ ಮುನಿಸಿಪಲ್ ಕಾಲೇಜಿನ ಮತಗಟ್ಟೆಯಲ್ಲಿ ಮತಯಂತ್ರವನ್ನು ಕತ್ತಲಿನಲ್ಲಿಟ್ಟು ಚುನಾವಣಾ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗಿದೆ. ಮತಚಾಲಾಯಿಸಲು ಬಂದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಚಿಹ್ನೆ, ಪಕ್ಷ ಮತಯಂತ್ರದಲ್ಲಿ ಗುರುತು ಸರಿಯಾಗಿ ಕಾಣುತ್ತಿಲ್ಲಾ ಎಂದು ಅಧಿಕಾರಿಗಳಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

gadag

ಬಿಜೆಪಿ ಮುಖಂಡ ಎಎಸ್.ವಿ ಸಂಕನೂರ ತಿಳಿಸಿದ ಬಳಿಕ ಎಚ್ಚೆತ್ತುಕೊಂಡ ಮತಗಟ್ಟೆ ಅಧಿಕಾರಿ ಎಸ್.ಎನ್ ಗದ್ದನಕೇರಿ ಹಾಗೂ ಸಿಬ್ಬಂದಿ ಕೂಡಲೇ ಮತಯಂತ್ರವನ್ನು ಸರಿ ಮಾಡಿದ್ದಾರೆ.

ಇನ್ನು ಗದಗ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷವಾಗಿ ಮತ ಕೇಂದ್ರವನ್ನು ನಿರ್ಮಾಣ ಮಾಡಲಾಗಿದೆ. ಮತದಾನಕ್ಕೆ ಬಂದ ಮತದಾರರಿಗೆ ಕುಳಿತುಕೊಳ್ಳಲು ಕುರ್ಚಿ, ಕೆಳಗೆ‌ ಮ್ಯಾಟ್ ವ್ಯವಸ್ಥೆ ಮಾಡಲಾಗಿದ್ದು, ಮತದಾರರ ಸ್ವಾಗತಕ್ಕೆ ವಿಶೇಷ ಸ್ವಾಗತ ಕಮಾನು ನಿರ್ಮಾಣ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+