ಗದಗ ಬಸ್ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರಿಡಬೇಕೆಂದು ಒತ್ತಾಯ
ಗದಗ, ಮಾರ್ಚ್ 3, ಗದಗದ ಬಸ್ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರಿಡಬೇಕು ಎಂದು ಒತ್ತಾಯಿಸಲಾಗಿದೆ. ಈ ಮನವಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಎಸ್ ಸವದಿ ಪ್ರತಿಕ್ರಿಯಿಸಿದ್ದಾರೆ.
''ಗದಗದಲ್ಲಿ ನವೀಕರಣವಾಗುತ್ತಿರುವ ಹಳೆಯ ಬಸ್ ನಿಲ್ದಾಣಕ್ಕೆ ಆದರ್ಶಪ್ರಾಯವಾದ ಡಾ ಪುಟ್ಟರಾಜ ಗವಾಯಿಗಳ ಹೆಸರನ್ನು ಇಡಬೇಕೆಂದು ಕೆಲವು ಸಂಘ ಸಂಸ್ಥೆಗಳು, ಪ್ರತಿಷ್ಠಿತ ವ್ಯಕ್ತಿಗಳು ಮತ್ತು ಸ್ಥಳೀಯರು ಒತ್ತಾಯಿಸಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬೇಡಿಕೆಯು ನ್ಯಾಯೋಚಿತವಾಗಿದ್ದು, ನಿಯಮಾನುಸಾರ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ'' ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

ಗದಗ ನಗರದಲ್ಲಿ ಇದ್ದ ಹಳೆಯ ಬಸ್ ನಿಲ್ದಾಣವನ್ನು ನವೀಕರಣ ಮಾಡಲಾಗುತ್ತಿದೆ. ಅದರ ಕಾಮಗಾರಿ ಮುಗಿದ ಮೇಲೆ ಅದಕ್ಕೆ ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕು ಎಂಬ ಒತ್ತಾಯ ಇದೆ. ಅದಕ್ಕೆ ಇದೀಗ ಉಪ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ.
ಅಗತ್ಯ ಕ್ರಮ ಕೈಗೊಳ್ಳುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.












Click it and Unblock the Notifications