ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾದಾಯಿ ಹೋರಾಟ : ಗದಗದಲ್ಲೂ ಭುಗಿಲೆದ್ದ ರೈತರ ಆಕ್ರೋಶ

|
Google Oneindia Kannada News

ಗದಗ, ಡಿಸೆಂಬರ್ 27 : ಮಹಾದಾಯಿ, ಕಳಸಾ ಬಂಡೂರಿ ಹೋರಾಟ ಹಿನ್ನೆಲೆ ನರಗುಂದದಲ್ಲಿ ರೈತರ ಅಕ್ರೋಶ ಬುಗಿಲೆದ್ದಿಗೆ. ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಪ್ರತಿಭಟನೆಗಳು ಪ್ರಾರಂಭವಾಗಿದೆ. ಸ್ಥಳೀಯರು ಪ್ರತಿಭಟನೆಗಳಿಗೆ ಬೆಂಬಲ ಸೂಚಿಸಿದ್ದಾರೆ.

ಮಹಾದಾಯಿ ಹೋರಾಟ: ಉತ್ತರ ಕರ್ನಾಟಕ ಸ್ತಬ್ಧಮಹಾದಾಯಿ ಹೋರಾಟ: ಉತ್ತರ ಕರ್ನಾಟಕ ಸ್ತಬ್ಧ

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಪ್ರತಿಭಟನಾಕಾರರಿಂದ ಹುಬ್ಬಳ್ಳಿ ಸೊಲ್ಲಾಪುರ ರಸ್ತೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯುತ್ತಿದೆ.

Mahadayi row: Gadag gets good response for bandh call

ಗಜೇಂದ್ರಗಡ ಪಟ್ಟಣದಲ್ಲೂ ನಸುಕಿನಲ್ಲೇ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಗಜೇಂದ್ರಗಡ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ,ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯಡಿಯೂರಪ್ಪ, ರಾಜ್ಯ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಸಲು ಬಿಡುವುದಿಲ್ಲ!ಉತ್ತರ ಕರ್ನಾಟಕದಲ್ಲಿ ಚುನಾವಣೆ ನಡೆಸಲು ಬಿಡುವುದಿಲ್ಲ!

ಗದಗ ನಗರದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಸಂಪೂರ್ಣ ಮುಚ್ಚಲಾಗಿದೆ. ಬಂದ್ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಭಿಕೋ ಎನ್ನುತ್ತಿವೆ. ಸರ್ಕಾರಿ, ಖಾಸಗಿ ಯಾವುದೇ ವಾಹನಗಳು ಸಂಚರಿಸುತ್ತಿಲ್ಲ. ಎಲ್ಲ ಚಲನಚಿತ್ರ ಮಂದಿರದಲ್ಲಿ ಚಿತ್ರ ಪ್ರದರ್ಶನಗಳು ರದ್ದಾಗಿದೆ.

English summary
Gadag, Ron and Naragunda taluks of Gadag district have hit following bandh call by farmers urging to resolve Mahadayi river dispute.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X