ನರಗುಂದ ಚುನಾವಣಾ ಫಲಿತಾಂಶ 2023: 5ನೇ ಸುತ್ತಿನ ಬಳಿಕ ಬಿಜೆಪಿಗೆ ಮುನ್ನಡೆ
ಗದಗ, ಮೇ 13: ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಐದನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ, ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಮುನ್ನಡೆ ಪಡೆದುಕೊಂಡಿತ್ತು. ಬಿಜೆಪಿಯ ಸಿಸಿ ಪಾಟೀಲ್ 23315 ಮತ ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ ಆರ್ ಯಾವಗಲ್ 22313 ಮತಗಳನ್ನು ಪಡೆದುಕೊಂಡಿದ್ದಾರೆ. ಐದನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ 1002 ಮತಗಳಿಂದ ಬಿಜೆಪಿ ಮುನ್ನಡೆ
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಚಂದ್ರಕಾಂತಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿ ಬಸವರೆಡ್ಡಿ ಯಾವಗಲ್ ವಿರುದ್ಧ 7 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕೂಡ ಕಾಂಗ್ರೆಸ್ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಕಳೆದ ಮೂರು ಚುನಾವಣೆಗಳಲ್ಲಿ ಎರಡು ಸಲ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದು ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಜೆಡಿಎಸ್ ಈ ಬಾರಿ ಹೊಸ ಮುಖಕ್ಕೆ ಮಣೆ ಹಾಕಿದ್ದು, ಗಿರಿಮಲ್ಲನಗೌಡ ಈಶ್ವರಗೌಡ ಪಾಟೀಲ ಬದಲಿಗೆ ರುದ್ರಗೌಡ ನಿಂಗನಗೌಡ ಪಾಟೀಲರನ್ನು ಕಣಕ್ಕಿಳಿಸಿದೆ. ನರಗುಂದ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿದೆ. ಸುಮಾರು, 80 ಸಾವಿರ ಲಿಂಗಾಯತ, 27 ಸಾವಿರ ಕುರುಬ, 25 ಸಾವಿರ ಮುಸ್ಲಿಮ್, 10 ಸಾವಿರ ಎಸ್‌ಟಿ, 5 ಸಾವಿರ ಬ್ರಾಹ್ಮಣ ಮತದಾರರಿದ್ದಾರೆ.












Click it and Unblock the Notifications