ಲೋಕಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಬ್ಲಾಕ್ ಮನಿ ರಾಜಕಾರಣ: ಮಾಜಿ ಸಿಎಂ
ಗದಗ, ಮಾರ್ಚ್ 31: ರಾಜ್ಯದಲ್ಲಿನ ಆಡಳಿತ ಪಕ್ಷ ಕಾಂಗ್ರೆಸ್ ಯಾವಾಗಲೂ ಬ್ಲಾಕ್ ಮನಿ ಮೇಲೆ ರಾಜಕಾರಣ ಮಾಡುತ್ತದೆ. ಸುಮಾರು 600 ಕೋಟಿ ರೂ.ತೆರಿಗೆ ವಂಚನೆ ಮಾಡಿರುವ ಕಾಂಗ್ರೆಸ್ ಅನ್ನು ನಾವ ಪ್ರಶ್ನಿಸಬಾರದೇ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೇಳಿದರು.
ಭಾನುವಾರ ಗದಗ ಜಿಲ್ಲೆಯಲ್ಲಿ ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್‌ಡಿ ದೇವೇಗೌಡರಿಗೆ ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಪ್ರಶ್ನಿಸಿದ್ದರು. ಆ ಹಿನ್ನೆಲೆಯಲ್ಲಿ ದೇವೇಗೌಡರು ಅವರ ಗರ್ವಭಂಗವಾಗಬೇಕಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ.

ನಾವು ಕಾಂಗ್ರೆಸ್ ವಿರುದ್ಧ ಮೈತ್ರಿ ಮಾಡಿಕೊಂಡಿದ್ದೇವೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರು, ಹೀಗಾಗಿ ಅವರ ವಿರುದ್ಧಿ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದು ಎಚ್ಚರಿಸಿದರು.
ರಾಜ್ಯ ರಾಜಕೀಯ ಹೊಸ ಗಾಳಿ
ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಮೈತ್ರಿ ಆದ ಬಳಿಕ ಈ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಮೈತ್ರಿ ನಂತರ ರಾಜ್ಯದಲ್ಲಿ ಹೊಸ ರಾಜಕೀಯ ಗಾಳಿ ಬೀಸುತ್ತಿದೆ. ಮೊನ್ನೆ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಎಲ್ಲ ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಜೆಡಿಎಸ್ ಬಿಜೆಪಿ ಸಮನ್ವಯ ಮುಂದುವರೆಸಿಕೊಂಡು ಹೋಗಬೇಕು ಎಂದು ನಿರ್ಧರಿಸಲಾಗಿದೆ.
ಮೈತ್ರಿಯಲ್ಲಿ ಗೊಂದಲ ಇಲ್ಲ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕಿದೆ. ನಾವು ದೇವೇಗೌಡರು ಹಾಗೂ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲಿದ್ದೇಎ. ಇನ್ನೂ ಮಂಡ್ಯದಲ್ಲಿ ಮೈತ್ರಿಯಲ್ಲಿ ಯಾವುದೇ ಗೊಂದಲಗಳು ಇಲ್ಲ. ಈಗಾಗಲೇ ಮೈತ್ರಿ ಪೈಕ್ಷಗಳು ಮಾತುಕತೆ ನಡೆಸಿವೆ. ಬಿಜೆಪಿ ರಾಜ್ಯಾಧ್ಯಕ್ಷರು ಮಾತನಾಡಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯ ಚಿತ್ರದುರ್ಗದಲ್ಲಿನ ಸಮಸ್ಯೆ ಶೀಘ್ರವೇ ಅಂತ್ಯಗೊಳ್ಳುವ ಭರವಸೆ ಇದೆ. ಬಿಜೆಪಿಯಲ್ಲಿ ಗೊಂದಲ ಉಂಟಾಗಿಲ್ಲ. ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಅವರೂ ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಮಹಿಳೆಯರಿಗೆ ಅವಮಾನ ಸರಿಯಲ್ಲ
ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಅಭ್ಯರ್ಥಿ ಯಾರೇ ಇರಲಿ ಮಹಿಳೆಯರ ಬಗ್ಗೆ ಮಾತನಾಡುವುದು ಸರಿಯಲ್ಲ. ಮಹಿಳೆಯರಿಗೆ ಅವಮಾನ ಮಾಡಿದಂತಾಗುತ್ತದೆ. ಅದಕ್ಕೆ ಸಹಜವಾಗಿ ವಿರೋಧ ವ್ಯಕ್ತವಾಗುತ್ತದೆ ಎಂದರು.
ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಬಸವರಾಜ ಬೊಮ್ಮಾಯಿ ಹಾವೇರಿ ಮತ್ತು ಗದಗ ಜಿಲ್ಲೆ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಮಾಜಿ ಸಿಎಂ ಆಗಿರುವ ಕಾರಣ ಅವರ ವರ್ಚಸ್ಸು ಕ್ಷೇತ್ರದಲ್ಲಿದ್ದು, ಅವರು ಗ್ರಾಮಗಳಿಗೆ, ಜಿಲ್ಲೆ, ಪಟ್ಟಣಗಳಿಗೆ ಭೇಟಿ ನೀಡುತ್ತದ್ದಂತೆ ಕಾರ್ಯಕರ್ತರು ಮುತ್ತಿಕೊಳ್ಳುವುದು ಸಾಮಾನ್ಯ ಎಂಬಂತಾಗಿದೆ.












Click it and Unblock the Notifications