• search
 • Live TV
ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರ ಹುಣ್ಣಿಮೆ: ಎತ್ತಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ: ಫೋಟೋ ವೈರಲ್

By ಗದಗ ಪ್ರತಿನಿಧಿ
|
Google Oneindia Kannada News

ಕೊಪ್ಪಳ, ಜೂನ್ 25: ಕರ್ನಾಟಕದಲ್ಲಿ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ ಪಕ್ಷದ ಕಾರ್ಯಕರ್ತರು ಹಾಗೂ ಶಾಸಕರಲ್ಲಿ ಗೊಂದಲ ಮನೆಮಾಡಿದೆ.

ಈ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಕಾರ ಹುಣ್ಣಿಮೆಗೆ ಸಿಂಗಾರಗೊಂಡ ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದು ತಮ್ಮ ಅಭಿಮಾನ ತೋರಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಕಾರ ಹುಣ್ಣಿಮೆಯನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ಕೊರೊನಾ ವೈರಸ್‌ನಿಂದಾಗಿ ಸರಳವಾಗಿ ಆಚರಿಸಲಾಗಿದೆ.

ಗದಗ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದ್ದು, ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅಭಿಮಾನಿಗಳು 'ಮುಂದಿನ ಸಿಎಂ ಸಿದ್ದರಾಮಯ್ಯ' ಎಂದು ಬರೆದಿದ್ದಾರೆ.

   ಇರಾಕ್ ಅಥವಾ ಇಸ್ರೇಲ್ ಆ ದಾಳಿ ಮಾಡಿರೋದ ಅಂತ!! | Oneindia Kannada

   ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನ ಕರಿ ಹರಿಯುವ ಸಂಪ್ರದಾಯಕ್ಕೆ ತಕ್ಕಂತೆ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭ ಮೆರವಣಿಗೆಗೆ ಸಿದ್ಧಗೊಳಿಸಿದ್ದ ಎತ್ತಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ ಬರವಣಿಗೆಯೊಂದು ಎಲ್ಲರ ಗಮನ ಸೆಳೆದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

   English summary
   Next chief minister siddaramaiah lines written on Bull in Thimmapur in Gadag district, pic goes viral.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X