ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದ ಈ ಜಿಲ್ಲೆಯಲ್ಲಿ 44 ದಿನದಿಂದ ಕೊರೊನಾ ಸಾವಿನ ಪ್ರಕರಣವಿಲ್ಲ

By Lekhaka
|
Google Oneindia Kannada News

ಗದಗ, ಡಿಸೆಂಬರ್ 02: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಾಣುತ್ತಿದೆ. ಕೊರೊನಾ ಪರೀಕ್ಷೆ ವ್ಯಾಪಕವಾಗಿ ನಡೆಯುತ್ತಿರುವುದು ಆರಂಭಿಕ ಹಂತದಲ್ಲೇ ಸೋಂಕಿನ ಪತ್ತೆಗೆ ಸಹಕಾರಿಯಾಗಿ ಸಾವಿನ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಸೋಂಕಿನ ಕುರಿತ ಜಾಗೃತಿಯೂ ಪ್ರಕರಣ ತಗ್ಗಲು ಸಹಕಾರಿಯಾಗಿದೆ.

ಈ ನಡುವೆ ಗದಗ ಜಿಲ್ಲೆಯಲ್ಲಿ ಕಳೆದ 44 ದಿನಗಳಲ್ಲಿ ಒಂದೇ ಒಂದು ಕೊರೊನಾ ಸೋಂಕಿನ ಸಾವಿನ ಪ್ರಕರಣ ಕಂಡುಬಂದಿಲ್ಲ.

ಭಾರತದಲ್ಲಿ ಒಂದೇ ದಿನ 36604 ಮಂದಿಗೆ ಕೊರೊನಾವೈರಸ್ ಪಾಸಿಟಿವ್ಭಾರತದಲ್ಲಿ ಒಂದೇ ದಿನ 36604 ಮಂದಿಗೆ ಕೊರೊನಾವೈರಸ್ ಪಾಸಿಟಿವ್

ಮಂಗಳವಾರ, ಡಿಸೆಂಬರ್ 1ರ ವರದಿ ಪ್ರಕಾರ ಗದಗ ಜಿಲ್ಲೆಯಲ್ಲಿ ಈವರೆಗೂ ಒಟ್ಟು 10750 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 10565 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯಕ್ಕೆ 44 ಸಕ್ರಿಯ ಪ್ರಕರಣಗಳು ಇದ್ದು, ಜಿಲ್ಲೆಯಲ್ಲಿ ಇದುವರೆಗೆ 141 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

Gadag: No Coronavirus Death Case In District Since 44 Days

ಅಕ್ಟೋಬರ್ 17ರಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಕೊನೆಯ ಪ್ರಕರಣ ದಾಖಲಾಗಿದೆ. ಅದಾದ ನಂತರ ಕೊರೊನಾ ಸೋಂಕಿನಿಂದ ಯಾವ ವ್ಯಕ್ತಿಯೂ ಸಾವನ್ನಪ್ಪಿಲ್ಲ. ಜಿಲ್ಲೆಯಲ್ಲಿ ಪ್ರತಿದಿನ 1,700 ಕೊರೊನಾ ಪರೀಕ್ಷೆ ಹಾಗೂ ಆರ್ ಟಿಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ಕೆಲವೇ ಕೆಲವು ಪಾಸಿಟಿವ್ ಪ್ರಕರಣಗಳು ಕಂಡುಬರುತ್ತಿವೆ. ಆರಂಭಿಕ ಹಂತದಲ್ಲೇ ಸೋಂಕು ಪತ್ತೆ ಮಾಡುತ್ತಿರುವುದು ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವುದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಹಬ್ಬದ ಸಮಯದಲ್ಲೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಭೀತಿ ಹೆಚ್ಚೇ ಇತ್ತು. ಆದರೆ ಇವೆಲ್ಲದರ ನಡುವೆಯೂ ಸೋಂಕಿನ ಪ್ರಮಾಣದಲ್ಲಿ ಭಾರೀ ಇಳಿಮುಖವಾಗಿರುವುದು ಸಂತಸದ ವಿಷಯವಾಗಿದೆ.

English summary
Gadag district has not reported covid 19 death cases since 44 days,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X