ಪುಟ್ಟರಾಜ ಗವಾಯಿಗಳ ಭಾವಚಿತ್ರ ಹರಿದ ಕಿಡಿಗೇಡಿಗಳು; ಪ್ರತಿಭಟನೆ
ಗದಗ, ಡಿಸೆಂಬರ್ 31; ಪಂಡಿತ ಪುಟ್ಟರಾಜ ಗವಾಯಿಗಳ ಭಾವಚಿತ್ರ ಇರುವ ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬ್ಯಾನರ್ ಹರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗುರುವಾರ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪುಟ್ಟರಾಜ ಗವಾಯಿಗಳ ವೃತ್ತದಲ್ಲಿ ಹಾಕಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಪುಟ್ಟರಾಜ ಗವಾಯಿಗಳ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಕರವೇ ಕಾರ್ಯಕರ್ತರು ಘಟನೆ ಖಂಡಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕಿಡಗೇಡಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

112 ತುರ್ತು ಸಹಾಯವಾಣಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದರು. ಹರಿದು ಹೋಗಿರುವ ಬ್ಯಾನರ್‌ಗಳನ್ನು ವೀಕ್ಷಿಸಿದರು. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.
ಹೊಸ ಬ್ಯಾನರ್ ಅಂಟಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಪೊಲೀಸರು ಹೇಳಿದರು. ಈ ವೇಳೆ ಕರವೇ ಕಾರ್ಯಕರ್ತರು ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಮನವಿಯನ್ನು ಸಲ್ಲಿಸಿದರು.
ವಿಡಿಯೋ
ಪಂಡಿತ್ ಪುಟ್ಟರಾಜ ಗವಾಯಿಗಳ ಭಾವಚಿತ್ರವನ್ನು ಯಾರೋ ಹರಿದು ಹಾಕಿದ್ದಾರೆ ಎಂದು ಆರೋಪಿಸಿ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.#Gadag @karave_KRV #Puttarajagavai pic.twitter.com/772SZezTs2
— oneindiakannada (@OneindiaKannada) December 31, 2020












Click it and Unblock the Notifications