ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುಟ್ಟರಾಜ ಗವಾಯಿಗಳ ಭಾವಚಿತ್ರ ಹರಿದ ಕಿಡಿಗೇಡಿಗಳು; ಪ್ರತಿಭಟನೆ

By ಗದಗ ಪ್ರತಿನಿಧಿ
|
Google Oneindia Kannada News

ಗದಗ, ಡಿಸೆಂಬರ್ 31; ಪಂಡಿತ ಪುಟ್ಟರಾಜ ಗವಾಯಿಗಳ ಭಾವಚಿತ್ರ ಇರುವ ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬ್ಯಾನರ್ ಹರಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗುರುವಾರ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪುಟ್ಟರಾಜ ಗವಾಯಿಗಳ ವೃತ್ತದಲ್ಲಿ ಹಾಕಿದ್ದ ಬ್ಯಾನರ್‌ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

ಗದಗ ಬಸ್ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರು ಗದಗ ಬಸ್ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರು

ಪುಟ್ಟರಾಜ ಗವಾಯಿಗಳ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಕರವೇ ಕಾರ್ಯಕರ್ತರು ಘಟನೆ ಖಂಡಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕಿಡಗೇಡಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 159 ಕೋಟಿ ರೂ. ನಷ್ಟಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 159 ಕೋಟಿ ರೂ. ನಷ್ಟ

Pandit Puttaraj Gawai Banner Damaged

112 ತುರ್ತು ಸಹಾಯವಾಣಿ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದರು. ಹರಿದು ಹೋಗಿರುವ ಬ್ಯಾನರ್‌ಗಳನ್ನು ವೀಕ್ಷಿಸಿದರು. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

 ಗದಗ ನಗರಾಭಿವೃದ್ಧಿ ಅಧಿಕಾರಿ ರುದ್ರೇಶ್​ ಮನೆ ಮೇಲೆ ಎಸಿಬಿ ದಾಳಿ ಗದಗ ನಗರಾಭಿವೃದ್ಧಿ ಅಧಿಕಾರಿ ರುದ್ರೇಶ್​ ಮನೆ ಮೇಲೆ ಎಸಿಬಿ ದಾಳಿ

Recommended Video

ಮಕ್ಕಳನ್ನು ಶಾಲೆಗೆ ಕಳುಹಿಸೋದು ಎಷ್ಟರ ಮಟ್ಟಿಗೆ ಸುರಕ್ಷಿತ | Oneindia Kannada

ಹೊಸ ಬ್ಯಾನರ್ ಅಂಟಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಪೊಲೀಸರು ಹೇಳಿದರು. ಈ ವೇಳೆ ಕರವೇ ಕಾರ್ಯಕರ್ತರು ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಮನವಿಯನ್ನು ಸಲ್ಲಿಸಿದರು.

ವಿಡಿಯೋ

English summary
The Karnataka Rakshana Vedike activists protest in Hombala village of Gadag. Protesters demand the police to take action against people who damaged Pandit Puttaraj Gawai banner.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X