ಗದಗ ಆಸ್ಪತ್ರೆಯಲ್ಲಿ ರೀಲ್ಸ್ ಮಾಡಿದ ಮೆಡಿಕಲ್ ವಿದ್ಯಾರ್ಥಿಗಳು ಸಸ್ಪೆಂಡ್: ಆಡಳಿತ ಮಂಡಳಿಯನ್ನು ಕ್ಯಾಕರಿಸಿ ಉಗಿಯುತ್ತಿರುವ ಜನ
ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಆಸ್ಪತ್ರೆ ಆವರಣದಲ್ಲಿ ರೀಲ್ಸ್ ಮಾಡಿದ ನಂತರ 38 ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ವಿದ್ಯಾರ್ಥಿಗಳು ಕನ್ನಡ ಹಾಗೂ ಹಿಂದಿ ಹಾಡಿಗೆ ನೃತ್ಯ ಮಾಡುವುದುದು ಕಂಡುಬಂದಿದೆ. ಇದು ವೈರಲ್ ಆದ ಬೆನ್ನಲ್ಲೇ ಜಿಮ್ಸ್ ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದೆ.
ಗದಗ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ವಿದ್ಯಾರ್ಥಿಗಳು ರೀಲ್ಸ್ ಮಾಡಿದ್ದು, ಈ ವಿಡಿಯೋ ಇದೀಗ ಎಲ್ಲಡೆ ಹರಿದಾಡುತ್ತಿದೆ. ಈ ಸಂಬಂಧ 38 ವೈದ್ಯಕೀಯ ವಿದ್ಯಾರ್ಥಿಗಳನ್ನು ಅಲ್ಲಿನ ಆಡಳಿತ ಮಂಡಳಿ ಅಮಾನತು ಮಾಡಿದೆ. ಇನ್ನು ಇದಕ್ಕೆ ಇನ್ನು ಇದಕ್ಕೆ ಪ್ರಿತಿಕ್ರಿಯೆಗಳು ಹೇಗೆ ವ್ಯಕ್ತವಾಗಿವೆ ಎಂದು ಇಲ್ಲಿ ಗಮನಿಸಿ.

"ಕೆಲಸದ ಸಂದರ್ಭಗಳಲ್ಲಿ ಎಂಥೆತಾ ದೊಡ್ಡ ಅಧಿಕಾರಿಗಳು ದೊಡ್ಡ ತಪ್ಪುಗಳನ್ನು ಮಾಡುತ್ತಾರೆ. ಅಂತಹವರ ವಿರುದ್ಧ ಕ್ರಮ ಜರುಗಿಸಿ. ಉದಾಹರಣಗೆ ಕೆಲಸಕ್ಕೆ ತಡವಾಗಿ ಬರುವುರು, ವೃತ್ತಿ ಧರ್ಮಕ್ಕೆ ದ್ರೋಹ ಬಗೆಯುತ್ತಿರುವವರನ್ನು ಅಮಾನತು ಮಾಡಿ. ಅದು ಬಿಟ್ಟು ಕೆಲಸದ ಒತ್ತಡವನ್ನು ನಿವಾರಿಸಿಕೊಳ್ಳಲು ರೀಲ್ಸ್ ಮಾಡುವ ವಿದ್ಯಾರ್ಥಿಗಳನ್ನು ಅಮಾನತು ಮಾಡುವುದು ಎಷ್ಟರ ಮಟ್ಟಿಗೆ ಸರಿ" ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.
#Karnataka 38 medical students from #GIMS in #Gadag were suspended by the authorities after their reels shot inside the hospital goes viral, reports @raghukoppar @NewIndianXpress @XpressBengaluru @KannadaPrabha @gadag_online @IMAIndiaOrg @dineshgrao pic.twitter.com/8SyBsv1yw3
— Amit Upadhye (@AmitSUpadhye) February 10, 2024
ಇತ್ತೀಚೆಗಷ್ಟೇ ವೈದ್ಯನೊಬ್ಬ ಚಿತ್ರದುರ್ಗ ಜಿಲ್ಲೆಯ ಭರಮಸಾಗದಲ್ಲಿ ಫ್ರೀ ವೆಡ್ಡಿಂಗ್ ಶೂಟ್ ಮಾಡಿಕೊಳಳ್ಳಲೆಂದೇ ವೈಯಕ್ತಿಕ ಉದ್ದೇಶದಿಂದ ಆಸ್ಪತ್ರೆಯನ್ನು ಬಳಸಿಕೊಂಡಿದ್ದರು. ಹೀಗೆ ಕರ್ತವ್ಯದ ವೇಳೆ ವೈದ್ಯರು ತಮ್ಮ ಜವಾಬ್ದಾರಿ ಮರೆತರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವುದು ಒಳಿತು. ಅದು ಬಿಟ್ಟು ಮೆಡಿಕಲ್ ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ತಮ್ಮ ಕೆಲಸದ ಒತ್ತಡವನ್ನು ನಿಯಂತ್ರಿಸಲು ಚಿಕ್ಕದಾಗಿ ರೀಲ್ಸ್ ಮಾಡಿದ್ದಕ್ಕೆ ಅವರನ್ನು ಅಮಾನತು ಮಾಡಿರುವುದು ಸರಿಯಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕೆಂಡಕಾರುತ್ತಾರೆ.
ಹೊರಗುತ್ತಿಗೆ ವೈದ್ಯ ಅಮಾನತು: ಸಾಮಾನ್ಯವಾಗಿ ಪ್ರೀ ವೆಡ್ಡಿಂಗ್ ಶೂಟ್‌ಗೆ ಅದ್ಭುತ ತಾಣಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಇಲ್ಲಿ ವೈದ್ಯನೊಬ್ಬ ಆಸ್ಪತ್ರೆಯಲ್ಲಿಯೇ ಪ್ರೀ ವೆಡ್ಡಿಂಗ್ ಶೂಟ್ ಮಾಡಿಕೊಂಡು ಅಮನಾತುಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ತಾಲೂಕಿನ ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಚಿತ್ರೀಕರಣ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೊರಗುತ್ತಿಗೆ ವೈದ್ಯ ಡಾ.ಅಬಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ.ಅವರು ಆದೇಶಿಸಿದ್ದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯ ಡಾ.ಅಬಿಷೇಕ್ ಅವರು ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಕಳೆದ ಫೆಬ್ರವರಿ 7ರಂದು ಪ್ರೀ ವೆಡ್ಡಿಂಗ್ ಶೂಟ್ ಮಾಡಿರುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು.
ಇಂತಹ ಕಾರ್ಯವು ನಿಯಮ ಬಾಹಿರವಾಗಿದ್ದು, ವೈದ್ಯರು ಕರ್ತವ್ಯ ಲೋಪವೆಸಗಿರುತ್ತಾರೆ. ಹೀಗಾಗಿ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ವರದಿಯನ್ವಯ ಡಾ.ಅಭಿಷೇಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ.ಅವರು ತಿಳಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications