ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಧ್ಯಯನ ಸಮಿತಿ ಸದಸ್ಯರಿಗೆ ಧರ್ಮದ ತಿಳುವಳಿಕೆ ಇಲ್ಲ: ರಂಭಾಪುರಿ ಶ್ರೀ

By Manjunatha
|
Google Oneindia Kannada News

ಗದಗ, ಡಿಸೆಂಬರ್ 23: 'ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ವಿಷಯದಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ನೇಮಿಸಿರುವ ಅಧ್ಯಯನ ಸಮಿತಿಗೆ ಪಂಚಪೀಠ ಜಗದ್ಗುರುಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಸಮಿತಿಯನ್ನು ವಿರೋಧಿಸಿ ವಿವಿಧ ಮಠದ ಸ್ವಾಮಿಗಳು ಗದಗಿನಲ್ಲಿ ಪಾದ ಯಾತ್ರೆ ನಡೆಸಿದರು. 'ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ವಿಷಯದಲ್ಲಿ ಸರ್ಕಾರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಸಮಿತಿ ರಚಿಸಿದೆ ಎಂದು ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಅಧ್ಯಯನ ಸಮಿತಿ ರಚಿಸಿರುವ ಹಿಂದೆ ಧರ್ಮ ಒಡೆಯುವ ವ್ಯವಸ್ಥಿತ ಸಂಚು ಅಡಗಿದೆ, ಸರ್ಕಾರ ರಚಿಸಿರುವ ಅಧ್ಯಯನ ಸಮಿತಿಯನ್ನು ಪಂಚಪೀಠಗಳ ಜಗದ್ಗುರುಗಳು ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

Rambapuri Shri opposes to Study Committee created to study Lingayatha-Veerashiva issue.

'ಸರ್ಕಾರ ಏಕಪಕ್ಷೀಯವಾಗಿ ಸಮಿತಿ ರಚಿಸಿದೆ. ಈ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಅಭಿಪ್ರಾಯವನ್ನೂ ಕೇಳಿಲ್ಲ ಎಂದ ಅವರು ಸಮಿತಿಯಲ್ಲಿರುವ 7 ಮಂದಿ ಸದಸ್ಯರಿಗೆ ಅಖಂಡ ವೀರಶೈವ-ಲಿಂಗಾಯತ ಧರ್ಮ ಮತ್ತು ಸಂಸ್ಕೃತಿ ಬಗ್ಗೆ ಸರಿಯಾದ ತಿಳುವಳಿಕೆಯೂ ಇಲ್ಲ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

'ವೀರಶೈವ-ಲಿಂಗಾಯತ ಎರಡೂ ಒಂದೇ ಎಂದು ಶಿಫಾರಸು ಮಾಡಿದರೆ ಅಭ್ಯಂತರ ಇಲ್ಲ. ಆದರೆ, ಲಿಂಗಾಯತಕ್ಕೆ ಮಾತ್ರ ಪ್ರತ್ಯೇಕ ಧರ್ಮದ ಮಾನ್ಯಗೆ ಶಿಫಾರಸು ಮಾಡಿದರೆ ಅದಕ್ಕೆ ನಮ್ಮ ಪ್ರಬಲ ವಿರೋಧವಿದೆ ಎಂದು ಹೇಳಿದರು.

ಡಿಸೆಂಬರ್ 24ರಂದು ಗದುಗಿನಲ್ಲಿ ನಡೆಯಲಿರುವ ಸಮನ್ವಯ ಸಮಾವೇಶದಲ್ಲಿ ಎಲ್ಲ ಮಠಾಧೀಶರು ಈ ಕುರಿತು ಸ್ಪಷ್ಟ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು. ಪ್ರತಿಭಟನಾ ಪಾದಯಾತ್ರೆಯಲ್ಲಿ ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಇದ್ದರು.

ಅಧ್ಯಯನ ಸಮಿತಿ ಸದಸ್ಯರ ಪಟ್ಟಿ
ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ವಿಷಯದಲ್ಲಿ ಅಧ್ಯಯನ ನಡೆಸಿ ವರದಿ ನೀಡಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್. ನಾಗಮೋಹನದಾಸ್‌ ನೇತೃತ್ವದಲ್ಲಿ ಸಮಿತಿಯನ್ನು ಸರ್ಕಾರ ರಚಿಸಿದೆ. ಸದಸ್ಯರ ಪಟ್ಟಿ ಇಂತಿದೆ.

ನ್ಯಾಯಮೂರ್ತಿ ನಾಗಮೋಹನ ದಾಸ್ (ಅಧ್ಯಕ್ಷ), ಮೈಸೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಮುಜಾಫರ್ ಅಸಾದಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ, ದೆಹಲಿ ಜೆಎನ್‌ಯು ಕನ್ನಡ ವಿಭಾಗದ ಪ್ರಾಧ್ಯಾಪಕ ಪುರುಷೋತ್ತಮ ಬಿಳಿಮಲೆ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್, ಹಿರಿಯ ಸಂಶೋಧಕ ರಾಮಕೃಷ್ಣ ಮರಾಠೆ, ಪತ್ರಕರ್ತ ಸರಜೂ ಕಾಟ್ಕರ್.

English summary
Rambapuri Shri and many other swamy of Panchapeeta Jagadguru opposes to Study Committee formed by govt to study Lingayatha-Veerashiva suppurate religion issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X