ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಲಕ್ಕುಂಡಿ ಶಿಲ್ಪಕಲೆ ಅನಾವರಣ, ವಿಶೇಷತೆಗಳು

ಗದಗ, ಜನವರಿ 23: ನವದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವದ ಸಿದ್ಧತೆಗಳು ನಡೆಯುತ್ತಿವೆ. ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪಾಲ್ಗೊಳ್ಳಲಿದೆ. ಲಕ್ಕುಂಡಿ ಶಿಲ್ಪಕಲೆಯೂ ಅನಾವರಣವಾಗುಲಿದ್ದು, ಈ ಸ್ತಬ್ಧ ಚಿತ್ರಗಳು ಅನೇಕ ವಿಶೇಷತೆಗಳನ್ನು ಹೊಂದಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ ಇದು ಸಾಗುವ ಮೂಲಕ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ಕರ್ನಾಟಕದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧ ಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ಈ ಬಾರಿ 'ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು' ಸ್ತಬ್ಧ ಚಿತ್ರವು ಪಥಸಂಚಲನದಲ್ಲಿ ಸಾಗಲಿದೆ.

Republic Day 2025 Lakkundi Temple Tableau All Set To Shine At Parade

ಈ ಬಾರಿ ಗದಗ ಜಿಲ್ಲೆಯ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯದ ಸ್ತಬ್ಧ ಚಿತ್ರ ಎಲ್ಲರನ್ನೂ ಸೆಳೆಯಲಿದೆ. ಈ ಸ್ತಬ್ಧ ಚಿತ್ರದ ವಿಶೇಷತೆಗಳ ಕುರಿತು ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಮಾಹಿತಿ ನೀಡಿದ್ದಾರೆ. ಈ ಸ್ತಬ್ಧ ಚಿತ್ರವು ಅತ್ಯಂತ ಸ್ಮರಣೀಯವಾದದ್ದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ. ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ ಎಂದು ಹೇಳಿದರು.

4 ಸ್ತಬ್ಧ ಚಿತ್ರಗಳ ಪಟ್ಟಿ: ದೆಹಲಿಯ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಕರ್ನಾಟಕದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 15 ವರ್ಷಗಳಿಂದ ನಿರಂತರವಾಗಿ ಪಾಲ್ಗೊಳ್ಳುತ್ತಿದೆ. 2025ರ ಪಥಸಂಚಲನಕ್ಕೆ ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು, ಮೆಕ್ಕೆಕಟ್ಟು: ಮರಕೆತ್ತನೆಯ ದೈವ ನಿಧಿ, ಕರ್ನಾಟಕದ ಸಮೃದ್ಧಿಯ ಆಚರಣೆಗಳು, ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು ಎಂಬ 4 ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು. ಮೊದಲ ಸಭೆಯಲ್ಲಿಯೇ ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿದೆ.

ವಿಷಯ ಆಯ್ಕೆ ಬಳಿಕ ಲಕ್ಕುಂಡಿಯ ಶಿಲ್ಪಕಲೆಯ ವೈಭವವನ್ನು ಅದರ ಪ್ರತಿರೂಪದಂತೆ ಕೆತ್ತುವ ಬೃಹತ್ ಸವಾಲು ಎದುರಾಗಿತ್ತು. ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಎತ್ತಿಹಿಡಿಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರೋತ್ಸಾಹ ಕೆಲಸಕ್ಕೆ ಮುನ್ನುಡಿ ಬರೆದಿತ್ತು.

ಗದಗದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಶರಣು ಗೋಗೇರಿ ಅವರು ಒದಗಿಸಿದ ಛಾಯಾಚಿತ್ರಗಳು ಮತ್ತು ಮಾಹಿತಿ ಸೇರಿದಂತೆ ವಿಷಯ ಪರಿಣತರು, ತಜ್ಞರು, ಕಲಾನಿರ್ದೇಶಕರು ಮತ್ತು ಕಲಾವಿದರೊಂದಿಗೆ ಪರಾಮರ್ಶಿಸಿಕೊಂಡು ಇಲಾಖೆಯು ಈ ಕೆಲಸವನ್ನು ಕೈಗೆತ್ತಿಕೊಂಡಿತ್ತು. ಅಂತರರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು.

ಸ್ತಬ್ಧ ಚಿತ್ರದ ಜೊತೆಗೆ ಮೈಸೂರು, ಬೆಂಗಳೂರು, ಗದಗ ಮತ್ತು ಧಾರವಾಡದ ಕಲಾವಿದರಿಂದ ಕೂಡಿರುವ 18 ಮಂದಿ ತಂಡವನ್ನು ಜಗ್ಗಲಿಗೆ ಕಲಾವಿದರಾದ ಲಿಂಗಯ್ಯ ಮುನ್ನಡೆಸುತ್ತಾರೆ. ಸ್ತಬ್ಧ ಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ ಮುನ್ನಡೆಯಲಿದ್ದಾರೆ. ಇನ್ನುಳಿದ 10 ಮಂದಿ ಸ್ತಬ್ಧಚಿತ್ರದ ಮೇಲ್ಭಾಗದಲ್ಲಿ ಪ್ರವಾಸಿಗರಾಗಿ ಕಾಣಿಸಿಕೊಳ್ಳಲಿದ್ದಾರೆ.

ಲಕ್ಕುಂಡಿಯ ದೇವಾಲಯದ ಕುರಿತು: ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ಶಿಲ್ಪಕಲೆಯ ತೊಟ್ಟಿಲು ಎಂದು ಕರೆಯಲಾಗುತ್ತದೆ. ಇದು ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿ 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ. 101 ಮೆಟ್ಟಿಲು ಬಾವಿಗಳು ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ. ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ.

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧ ಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತವಾಗಿದೆ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯ 15ಕ್ಕೆ ಇಳಿಕೆ ಮಾಡಿದೆ.

ಈಗ ಇದು ತೀವ್ರ ಪೈಪೋಟಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಕರ್ನಾಟಕವು 15 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+