ರೋಣ ಚುನಾವಣಾ ಫಲಿತಾಂಶ 2023: ಕಾಂಗ್ರೆಸ್ ಅಭ್ಯರ್ಥಿ ಜಿಎಸ್ ಪಾಟೀಲ್‌ಗೆ 3108 ಮತಗಳ ಮುನ್ನಡೆ
ಗದಗ, ಮೇ 13: ರೋಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯದ ನಂತರ ಕಾಂಗ್ರೆಸ್ ಅಭ್ಯರ್ಥಿ ಜಿ ಎಸ್ ಪಾಟೀಲ್ 17836 ಮತ ಪಡೆಯುವ ಮೂಲಕ 3108 ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ 14728 ಮತ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ.
ಬಿಜೆಪಿ ಪಕ್ಷದಿಂದ ಹಾಲಿ ಶಾಸಕ ಕಳಕಪ್ಪ ಗುರುಶಾಂತಪ್ಪ ಬಂಡಿ ಸ್ಪರ್ಧಿಸಿದ್ದು, ಕಾಂಗ್ರೆಸ್‌ನಿಂದ ಜಿಎಸ್ ಪಾಟೀಲ್ ಸ್ಪರ್ಧೆ ಮಾಡಿದ್ದಾರೆ. ಜೆಡಿಎಸ್‌ನಿಂದ ಮುಗದಮ್ ಸಾಬ್ ಮುಧೋಳ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿ ಇಲ್ಲಿ ಮತ್ತೊಮ್ಮೆ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದರೆ, ಕಾಂಗ್ರೆಸ್ ಕೂಡ ಗೆಲುವಿನ ವಿಶ್ವಾಸದಲ್ಲಿದೆ.

2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಳಕಪ್ಪ ಗುರುಶಾಂತಪ್ಪ ಬಂಡಿ 83 ಸಾವಿರಕ್ಕಿಂತ ಹೆಚ್ಚು ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಗುರುಪಾದಗೌಡ ಸಂಗನಗೌಡ ಪಾಟೀಲ ಅವರನ್ನು 7 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದರು. ಕಳಕಪ್ಪ ಬಂಡಿಯ ಅವರ ಪತ್ನಿ ಸಂಯುಕ್ತಾ ಬಂಡಿ ಕೂಡ ಅಖಾಡಕ್ಕಿಳಿದು, ಪತಿಯ ಪರವಾಗಿ ಮತಯಾಚನೆ ಮಾಡಿದ್ದರು.
ಕಳೆದ ಬಾರಿ ಚುನಾವಣೆಯಲ್ಲಿ ಸೋತರೂ ಕೂಡ ಈ ಬಾರಿ ಜಿ. ಎಸ್ ಪಾಟೀಲ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕ್ಷೇತ್ರದ ಲಿಂಗಾಯತ ಮತಗಳೊಂದಿಗೆ ಕುರುಬ ಸೇರಿದಂತೆ ಇತರೆ ಮತಗಳು ತಮ್ಮ ಕೈಹಿಡಿಯಬಹುದು ಎನ್ನುವ ನಂಬಿಕೆಯಲ್ಲಿದ್ದಾರೆ.












Click it and Unblock the Notifications