• search
  • Live TV
ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಶವನ್ನು ಚೂರು ಮಾಡುವ ಕಾಂಗ್ರೆಸ್‌ನಿಂದ ಭಾರತ್‌ ಜೋಡೋ ಯಾತ್ರೆ; ಸಿಎಂ ವ್ಯಂಗ್ಯ

By ಗದಗ ಪ್ರತಿನಿಧಿ
|
Google Oneindia Kannada News

ಗದಗ, ನವೆಂಬರ್, 08; ಕಾಂಗ್ರೆಸ್‌ನವರು ದೇಶ ಇಬ್ಭಾಗವಾಗುವಂತೆ ಮಾಡಿದರು. ಪಂಜಾಬ್ ಅನ್ನು ಖಾಲಿಸ್ತಾನ ಮಾಡಲು ಪ್ರಯತ್ನಿಸಿದ್ದು, ದೇಶವನ್ನು ಚೂರು ಮಾಡುವ ಕಾಂಗ್ರೆಸ್ ಪಕ್ಷದವರು ಈಗ "ಭಾರತ್‌ ಜೋಡೋ" ಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿರಹಟ್ಟಿಯಲ್ಲಿ ವ್ಯಂಗ್ಯವಾಡಿದರು.

ಅವರು ಇಂದು ಶಿರಹಟ್ಟಿಯಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿ, ಸತೀಶ್ ಜಾರಕಿಹೊಳಿ 'ಹಿಂದೂ' ಹೊಲಸು ಪದ ಅಂತಾ ಹೇಳುವ ಮೂಲಕ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇಡೀ ಭಾರತ ದೇಶದ ಹಿಂದೂಗಳನ್ನು ಅವಮಾನ ಮಾಡಲಾಗಿದೆ. ಶ್ರೀಮಂತ ಹಾಗೂ ಪುರಾತನ ಪರಂಪರೆ, ಸಂಸ್ಕೃತಿಯುಳ್ಳ ಹಿಂದೂ ಧರ್ಮ ನಮ್ಮದು. ಈ ಬಗ್ಗೆ ಚರ್ಚೆ ಮಾಡೋಣ ಅಂತಾರೆ. ಇದರಲ್ಲಿ ಚರ್ಚೆ ಮಾಡುವುದೇನಿದೆ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಇದನ್ನು ಖಂಡಿಸಿಲ್ಲ. ಭಾರತದ ಅಸ್ಮಿತೆಯ ಪ್ರಶ್ನೆ ಬಂದರೆ, ಭಾಜಪ ಪುಟಿದೇಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸತೀಶ್ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ಎಂದ ಸಿಎಂ ಬೊಮ್ಮಾಯಿಸತೀಶ್ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ಎಂದ ಸಿಎಂ ಬೊಮ್ಮಾಯಿ

2018ರ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ಕೊಟ್ಟಿದ್ದೀರಿ. 2018ರಲ್ಲಿ 10 ಜನರು ಕೇವಲ 500 ಮತಗಳ ಅಂತರದಿಂದ ಸೋತರು. ಅವರು ಗೆದ್ದಿದ್ದರೆ ಸಮ್ಮಿಶ್ರ ಸರ್ಕಾರ ಬರುತ್ತಿರಲಿಲ್ಲ. ಅಧಿಕಾರ ಇಲ್ಲದೆ ಕಾಂಗ್ರೆಸ್ ಇರಲು ಸಾಧ್ಯವಿಲ್ಲ. ಹಿಂಬಾಗಿಲಿನಿಂದ ಬಂದು ಸರ್ಕಾರ ರಚಿಸಿದರೂ ಕೂಡ ಅದೂ ಯಶಸ್ವಿ ಆಗಲಿಲ್ಲ. ಕಾಂಗ್ರೆಸ್‌ನವರು ಅಧಿಕಾರವನ್ನು ಕೇವಲ ಸ್ವಾರ್ಥಕ್ಕಾಗಿ ಬಳಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಅವರನ್ನು ಮತ್ತೆ ಮನೆಗೆ ಕಳುಹಿಸುವ ಸಂಕಲ್ಪ ಮಾಡಬೇಕು ಎಂದರು.

ಕಾಂಗ್ರೆಸ್‌ನದ್ದು ಒಡೆದು ಆಳುವುದು ನೀತಿ

ಕಾಂಗ್ರೆಸ್‌ನದ್ದು ಒಡೆದು ಆಳುವುದು ನೀತಿ

ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ 27 ಲಕ್ಷ ಕುಟುಂಬಗಳಿಗೆ ನೀರು ತಲುಪಿಸುವ ಕೆಲಸವನ್ನು ಮಾಡಿದ್ದೇವೆ. ಕಾಂಗ್ರೆಸ್ ಕಳೆದ ಐವತ್ತು ವರ್ಷದಲ್ಲಿ ಮನೆಗಳಿಗೆ ನೀರು ಕೊಡುವ ಕೆಲಸವನ್ನು ಮಾಡಿಲ್ಲ. ಕಾಂಗ್ರೆಸ್‌ನದ್ದು ಒಡೆದು ಆಳುವುದು ನೀತಿ ಆಗಿದೆ. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ, ಧರ್ಮವನ್ನು ಒಡೆದು ಆಡಳಿತ ನಡೆಸಿದರು. ಈಗಲೂ ಅದೇ ರೀತಿ ಮಾಡುತ್ತಿದ್ದಾರೆ. ಅಲ್ಪ ಸಂಖ್ಯಾತರಿಗೂ ಕಾಂಗ್ರೆಸ್ ಅನ್ಯಾಯ ಮಾಡಿದೆ. ವಕ್ಫ್ ಆಸ್ತಿಯನ್ನು ಕಾಂಗ್ರೆಸ್ ನಾಯಕರು ಲಪಟಾಯಿಸಿದ್ದಾರೆ. ಇದಕ್ಕೆ ಸಂಬಂದಪಟ್ಟ ವರದಿಯನ್ನು ವಿಧಾನಸಭೆಯಲ್ಲಿ ಈಗಾಗಲೇ ಮಂಡಿಸಿದ್ದೇವೆ. ಇದಕ್ಕೆ ಪೂರಕ ತನಿಖೆಯನ್ನು ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಬಿ.ಸಿ.ಪಾಟೀಲ್, ರಾಮುಲು, ಸಂಸದ ಶಿವಕುಮಾರ್‌ ಉದಾಸಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಸತೀಶ್ ಜಾರಕಿಹೊಳಿಯಿಂದ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ: ಸಿಎಂ ಬಸವರಾಜ ಬೊಮ್ಮಾಯಿಸತೀಶ್ ಜಾರಕಿಹೊಳಿಯಿಂದ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ: ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಗದಗ ಯಲವಿಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂಪಾಯಿ ನೀಡಲಾಗುವುದು. ಈ ರೈಲು ಶಿರಹಟ್ಟಿಯ ಮೂಲಕ ಸಾಗುವ ಬಗ್ಗೆ ಪೂರಕ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗದಗದಲ್ಲಿ ಹೇಳಿದರು.

ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಕ್ಷ ಜನಸಂಕಲ್ಪ ಯಾತ್ರೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಜಾಲವಾಡಗಿ ನೀರಾವರಿ ಯೋಜನೆಗೆ ಚಾಲನೆ ಹಾಗೂ ತಮಗೊಂಡ ಯೋಜನೆಗಳಿಗೆ ಶೀಘ್ರದಲ್ಲಿ ಮಂಜೂರಾತಿ ನೀಡಲಾಗುವುದು. ಶಿರಹಟ್ಟಿ ಮುಂಡರಗಿ ಕ್ಷೇತ್ರವನ್ನು ಪ್ರವಾಸೋದ್ಯಮದ ಗಮ್ಯವಾಗಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಇನ್ನು ಲಮಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಒಂದು ತಿಂಗಳಲ್ಲಿ ಮಾಡಲಾಗುವುದು. ತಾಂಡಾದ ಪ್ರತಿಯೊಂದು ಮನೆಗೂ ಹಕ್ಕುಪತ್ರಗಳನ್ನು ಒಂದು ತಿಂಗಳಿನಲ್ಲಿ ತಲುಪಿಸಲಾಗುವುದು. ಅವರ ಬೇಡಿಕೆಯನ್ನು ಈಡೇರಿಸುವುದು ಸರ್ಕಾರ ಬದ್ಧತೆಯಾಗಿದೆ. ಶಿರಹಟ್ಟಿಯಲ್ಲಿ ಕನಕದಾಸರ ಸಭಾಭವನ ನಿರ್ಮಾಣಕ್ಕೆ ಬೇಡಿಕೆ ಬಂದಿದೆ. ಇದಕ್ಕಾಗಿ ಒಂದು ಕೋಟಿ ರೂಪಾಯಿ ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಜಿಲ್ಲೆಯ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ

ಜಿಲ್ಲೆಯ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ

ಗದಗ ಜಿಲ್ಲೆಗೆ 1.20 ಲಕ್ಷ ರೈತರಿಗೆ ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ 209 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಆಗಿದೆ. ಗದಗ ಜಿಲ್ಲೆಗೆ 97 ಕೋಟಿ ರೂಪಾಯಿ ಬೆಳೆ ವಿಮೆ ಬಂದಿದೆ. 9 ಕೋಟಿ ರೂಪಾಯಿಗಳ ರೈತ ವಿದ್ಯಾನಿಧಿಯನ್ನು ಈ ಜಿಲ್ಲೆಯ ಮಕ್ಕಳಿಗೆ ನೀಡಲಾಗಿದೆ. ಪಿಎಂ ಕಿಸಾನ್ ಯೋಜನೆಯಡಿ 159 ಕೋಟಿ ರೂಪಾಯಿಗೆ ಜಿಲ್ಲೆಗೆ ಬಂದಿದೆ. ಈ ಮೂಲಕ ರೈತಾಪಿ ವರ್ಗವನ್ನು ಬಲಿಷ್ಟಗೊಳಿಸಲು ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ರೈತ ಯಶಸ್ವಿನಿ ಯೋಜನೆ ಪ್ರಾರಂಭ

ರೈತ ಯಶಸ್ವಿನಿ ಯೋಜನೆ ಪ್ರಾರಂಭ

ನಮ್ಮ ನಾಯಕ ಯಡಿಯೂರಪ್ಪ ಅವರು ಸಂಧ್ಯಾಸುರಕ್ಷಾ, ಮಕ್ಕಳಿಗೆ ಸೈಕಲ್, ಭಾಗ್ಯ ಲಕ್ಷ್ಮೀ ಯೊಜನೆ, ರೈತರಿಗೆ 10 ಎಚ್‌ಪಿ ಉಚಿತ ವಿದ್ಯುತ್, ಕಿಸಾನ್ ಸಮ್ಮಾನ್‌ ಯೋಜನೆಗಳ ಮೂಲಕ ರಾಜ್ಯ ಸರ್ಕಾರದಿಂದ 4,000 ರೂಪಾಯಿ ಸೇರಿ, ಒಟ್ಟು 10,000 ರೂಪಾಯಿ ನೀಡಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ತಂದಿದ್ದಾರೆ. ಇದರಿಂದ 10.16 ಲಕ್ಷ ಮಕ್ಕಳಿಗೆ ಪ್ರಯೋಜನ ಸಹಾಯ ಆಗಿದೆ. ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೂ ಈ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ರೈತ ಯಶಸ್ವಿನಿ ಯೋಜನೆ ಪ್ರಾರಂಭಿಸಲಾಗಿದ್ದು, ಇದಕ್ಕಾಗಿ 500 ಕೋಟಿ ರೂಪಾಯಿ ಇಡಲಾಗಿದೆ. ರೈತಶಕ್ತಿ, ಡೀಸೆಲ್ ಯೋಜನೆಯಿಂದ 28 ಲಕ್ಷ ರೈತರಿಗೆ ಅನುಕೂಲವಾಗಿದೆ ಎಂದರು.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಿಸಲು ಕ್ರಮ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಿಸಲು ಕ್ರಮ

ಹಿಂದುಳಿದ ವರ್ಗದವರ ವಿದ್ಯಾರ್ಥಿಗಳ ವಸತಿನಿಲಯ ವೇತನವನ್ನು ಹೆಚ್ಚಿಸಲಾಗಿದೆ. 50 ಕನಕದಾಸ ಹಾಸ್ಟೆಲ್‌ಗಳು, 100 ಅಂಬೇಡ್ಕರ್ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಿಸುವ ದಿಟ್ಟ ಕ್ರಮವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಸಮಾಜವನ್ನು ಎತ್ತಿಹಿಡಿಯುವ ಕೆಲಸವನ್ನು ಬದ್ಧತೆಯಿಂದ ಮಾಡಲಾಗಿದೆ ಎಂದರು.

ರಾಜ್ಯದ ಸಮಗ್ರ ಅಭಿವೃದ್ದಿಗಾಗಿ ಪ್ರತಿ ಗ್ರಾಮದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ, ತಲಾ 2 ಸಂಘಕ್ಕೆ 5 ಲಕ್ಷ ರೂಪಾಯಿ ನೀಡಲಾಗುವುದು. ಅದೇ ರೀತಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯಡಿ ಪ್ರತಿ ಗ್ರಾಮದ ತಲಾ 2 ಸಂಘಕ್ಕೆ 5 ಲಕ್ಷ ರೂಪಾಯಿ ನೀಡಲಾಗುವುದು. ಇದರಿಂದ 5 ಲಕ್ಷ ಮಹಿಳೆಯರು ಹಾಗೂ 5 ಲಕ್ಷ ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆ ಕಲ್ಪಿಸಿದಂತಾಗುತ್ತದೆ. ಸರ್ಕಾರದ ಅಭಿವೃದ್ಧಿ ಯೋಜನೆಗಳಲ್ಲಿ ಜನರನ್ನು ಪಾಲುದಾರರನ್ನಾಗಿ ಮಾಡುವ ಗುರಿ ನಮ್ಮದಾಗಿದೆ ಎಂದರು.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
Chief Minister Basavaraj Bommai expressed outrage in Shirahatti, Congress doing Bharat Jodo Yatra to divide India. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X