ಶಿರಹಟ್ಟಿ ಚುನಾವಣಾ ಫಲಿತಾಂಶ 2023: ಕೊರೊನಾ ಸಂಕಷ್ಟದಲ್ಲಿ ನೆರವಾದ ಡಾಕ್ಟರ್ ಗೆ ಗೆಲುವಿನ ಮಾಲೆ
ಗದಗ, ಮೇ 13: ಗದಗ ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರವಾದ ಶಿರಹಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಚಂದ್ರು ಲಮಾಣಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ರಾಮಕೃಷ್ಣಪ್ಪ ದೊಡ್ಡಮನಿ ವಿರುದ್ಧ 25 ಸಾವಿರಕ್ಕೂ ಹೆಚ್ಚಿನ ಮತಗಳಲ್ಲಿ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಹಾಲಿ ಶಾಸಕ ರಾಮಣ್ಣ ಲಮಾಣಿ ಅವರನ್ನು ಕೈಬಿಟ್ಟ ಬಿಜೆಪಿ ಡಾ. ಚಂದ್ರು ಲಮಾಣಿಗೆ ಟಿಕೆಟ್ ನೀಡಿತ್ತು.
ಡಾ. ಚಂದ್ರು ಲಮಾಣಿ 73,600 ಮತಗಳನ್ನು ಪಡೆದಿದ್ದರೆ, ಪಕ್ಷೇತರ ಅಭ್ಯರ್ಥಿ ರಾಮಕೃಷ್ಣಪ್ಪ ದೊಡ್ಡಮನಿ 45,637 ಮತ ಪಡೆದಿದ್ದಾರೆ, ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಸುಜಾತ ಎನ್ ದೊಡ್ಡಮನಿ 34,550 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಕೋವಿಡ್-19 ಸಂದರ್ಭದಲ್ಲಿ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲ್ಲೂಕುಗಳಲ್ಲಿ ಸಾಮಾಜಿಕ ಸೇವೆ ಸಲ್ಲಿಸುವ ಮೂಲಕ ಜನರ ಪ್ರೀತಿ ಗಳಿಸಿದ್ದ ಡಾ. ಚಂದ್ರು ಲಮಾಣಿ ಅವರಿಗೆ ಜನ ಬಹುಪರಾಕ್ ಹೇಳಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಆಂತರಿಕ ಭಿನ್ನಮತ ಸೋಲಿಗೆ ಕಾರಣ ಎನ್ನಲಾಗಿದೆ.












Click it and Unblock the Notifications