ಶಿರಹಟ್ಟಿ ಚುನಾವಣಾ ಫಲಿತಾಂಶ 2023: ಬಿಜೆಪಿ ಅಭ್ಯರ್ಥಿ ಚಂದ್ರು ಲಮಾಣಿಗೆ 10848 ಮತಗಳ ಮುನ್ನಡೆ
ಗದಗ, ಮೇ 13: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಚಂದ್ರು ಲಮಾಣಿ ಏಳನೇ ಸುತ್ತಿನ ಮತ ಎಣಿಕೆ ಬಳಿಕ 10848 ಮತಗಳ ಭರ್ಜರಿ ಮುನ್ನಡೆ ಪಡೆದುಕೊಂಡಿದ್ದಾರೆ. ಲಮಾಣಿ 27866 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ದೊಡ್ಡಮನಿ 16414 ಮತಗಳನ್ನು ಪಡೆದುಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ, ರಾಮಕೃಷ್ಣ ದೊಡ್ಡಮನಿ ಅವರಿ 17018 ಮತಗಳನ್ನು ಪಡೆದುಕೊಂಡಿದ್ದಾರೆ.
ಹಾಲಿ ಶಾಸಕ ರಾಮಣ್ಣ ಲಮಾಣಿ ಅವರನ್ನು ಕೈಬಿಟ್ಟ ಬಿಜೆಪಿ ಡಾ. ಚಂದ್ರು ಲಮಾಣಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಕೂಡ ಹೊಸ ಮುಖಕ್ಕೆ ಮಣೆ ಹಾಕಿದ್ದು, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಜಾತಾ ದೊಡ್ಡಮನಿ ಅವರನ್ನು ಕಣಕ್ಕಿಳಿಸಿದೆ.

ಕೋವಿಡ್-19 ಸಂದರ್ಭದಲ್ಲಿ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲ್ಲೂಕುಗಳಲ್ಲಿ ಸಾಮಾಜಿಕ ಸೇವೆ ಸಲ್ಲಿಸುವ ಮೂಲಕ ಜನರ ಪ್ರೀತಿ ಗಳಿಸಿದ್ದ ಡಾ. ಚಂದ್ರು ಲಮಾಣಿ ಗೆಲ್ಲುವ ವಿಶ್ವಾಸದಿಂದ ಬಿಜೆಪಿ ಟಿಕೆಟ್ ನೀಡಿದೆ. ಎಸ್‌ಸಿ ಸಮುದಾಯದ ಸುಜಾತ ದೊಡ್ಡಮನಿ ಅವರಿಗೆ ಟಿಕೆಟ್ ನೀಡಿರುವುದರಿಂದ ದಲಿತರ ಮತಗಳು ಕಾಂಗ್ರೆಸ್‌ಗೆ ಬೀಳುವ ಲೆಕ್ಕಾಚಾರದಲ್ಲಿದೆ.
ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಒಳಬೇಗುದಿ ಹೆಚ್ಚಾಗಿದ್ದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.












Click it and Unblock the Notifications