'ಶ್ರೀರಾಮುಲು ಮುಂದಿನ ಸಿಎಂ' ಹೇಳಿಕೆ ಸರಿ ಅಲ್ಲ ಎಂದ ಶೋಭಾ ಕರಂದ್ಲಾಜೆ
ಗದಗ, ಅಕ್ಟೋಬರ್ 25: ಶ್ರೀರಾಮುಲು ಮುಂದಿನ ಸಿಎಂ ಆಗುತ್ತಾರೆ ಎಂದಿದ್ದ ಮಾಜಿ ಸಚಿವ ವಿ.ಸೋಮಣ್ಣ ಹೇಳಿಕೆಯಲ್ಲಿ ಬಿಜೆಪಿ ನಾಯಕಿ ಶೋಭಾ ಕರಂದ್ಲಾಕೆ ಖಂಡಿಸಿದ್ದಾರೆ.
ಗದಗದಲ್ಲಿ ಮಾತನಾಡಿದ ಅವರು, ಸೋಮಣ್ಣ ಅವರ ಹೇಳಿಕೆಯಲ್ಲಿ ಹುರುಳಿಲ್ಲ, ಯಡಿಯೂರಪ್ಪ ಅವರೇ ರಾಜ್ಯ ಬಿಜೆಪಿ ನಾಯಕರು ಅವರೇ ಮುಂದಿನ ಸಿಎಂ ಎಂದು ಹೇಳಿದ್ದಾರೆ.
ಉಪಚುನಾವಣೆ ಸೇರಿದಂತೆ ಮುಂದಿನ ಸಾರ್ವತ್ರಿಕ ಚುನಾವಣೆ ಸಹ ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಬಿಜೆಪಿ ಹೈಕಮಾಂಡ್‌ಗೆ ಯಡಿಯೂರಪ್ಪ ಅವರ ಮೇಲೆ ಅಪಾರ ವಿಶ್ವಾಸವಿದೆ ಎಂದ ಅವರು ಇಂತಹಾ ಸಂದರ್ಭದಲ್ಲಿ ಈ ರೀತಿ ಹೇಳಿಕೆಗಳನ್ನು ನೀಡಿ ಗೊಂದಲ ಉಂಟುಮಾಡುವುದು ತಪ್ಪು ಎಂಬ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಶಿವಮೊಗ್ಗ, ಬಳ್ಳಾರಿ, ಜಮಖಂಡಿಯಲ್ಲಿ ಬಿಜೆಪಿ ಗೆಲುವು ಖಾಯಂ ಎಂದು ಹೇಳಿದರು.
ಉಪಚುನಾವಣೆ ಬಳಿಕ ಬಿಜೆಪಿ ಶಾಸಕರ ಸಂಖ್ಯಾಬಲ 105ಕ್ಕೆ ಏರುತ್ತದೆ. ಆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳು ನಡೆಯುತ್ತವೆ ಎಂದ ಅವರು, ಆಪರೇಷನ್ ಕಮಲ ಮಾಡದಂತೆ ಬಿಜೆಪಿ ನಿರ್ಣಯಿಸಿದೆ ಎಂದು ಹೇಳಿದರು.












Click it and Unblock the Notifications