ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಶ್ರೀರಾಮುಲು ಮುಂದಿನ ಸಿಎಂ' ಹೇಳಿಕೆ ಸರಿ ಅಲ್ಲ ಎಂದ ಶೋಭಾ ಕರಂದ್ಲಾಜೆ

|
Google Oneindia Kannada News

ಗದಗ, ಅಕ್ಟೋಬರ್ 25: ಶ್ರೀರಾಮುಲು ಮುಂದಿನ ಸಿಎಂ ಆಗುತ್ತಾರೆ ಎಂದಿದ್ದ ಮಾಜಿ ಸಚಿವ ವಿ.ಸೋಮಣ್ಣ ಹೇಳಿಕೆಯಲ್ಲಿ ಬಿಜೆಪಿ ನಾಯಕಿ ಶೋಭಾ ಕರಂದ್ಲಾಕೆ ಖಂಡಿಸಿದ್ದಾರೆ.

ಯಡಿಯೂರಪ್ಪ ಕೇಸರಿ ನೆಲದಲ್ಲಿ ಸಿದ್ದರಾಮಯ್ಯ 'ಜಾತ್ಯತೀತ' ಸವಾರಿ ಯಡಿಯೂರಪ್ಪ ಕೇಸರಿ ನೆಲದಲ್ಲಿ ಸಿದ್ದರಾಮಯ್ಯ 'ಜಾತ್ಯತೀತ' ಸವಾರಿ

ಗದಗದಲ್ಲಿ ಮಾತನಾಡಿದ ಅವರು, ಸೋಮಣ್ಣ ಅವರ ಹೇಳಿಕೆಯಲ್ಲಿ ಹುರುಳಿಲ್ಲ, ಯಡಿಯೂರಪ್ಪ ಅವರೇ ರಾಜ್ಯ ಬಿಜೆಪಿ ನಾಯಕರು ಅವರೇ ಮುಂದಿನ ಸಿಎಂ ಎಂದು ಹೇಳಿದ್ದಾರೆ.

ರಾಮುಲು ಅವರದ್ದು ಕಾಂಗ್ರೆಸ್‌ ಕುಟುಂಬ, ಅಣ್ಣ ಪಕ್ಷದ ಕಾರ್ಯಕರ್ತರಾಗಿದ್ದರು: ಡಿಕೆಶಿರಾಮುಲು ಅವರದ್ದು ಕಾಂಗ್ರೆಸ್‌ ಕುಟುಂಬ, ಅಣ್ಣ ಪಕ್ಷದ ಕಾರ್ಯಕರ್ತರಾಗಿದ್ದರು: ಡಿಕೆಶಿ

ಉಪಚುನಾವಣೆ ಸೇರಿದಂತೆ ಮುಂದಿನ ಸಾರ್ವತ್ರಿಕ ಚುನಾವಣೆ ಸಹ ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ನಡೆಯಲಿದೆ. ಬಿಜೆಪಿ ಹೈಕಮಾಂಡ್‌ಗೆ ಯಡಿಯೂರಪ್ಪ ಅವರ ಮೇಲೆ ಅಪಾರ ವಿಶ್ವಾಸವಿದೆ ಎಂದ ಅವರು ಇಂತಹಾ ಸಂದರ್ಭದಲ್ಲಿ ಈ ರೀತಿ ಹೇಳಿಕೆಗಳನ್ನು ನೀಡಿ ಗೊಂದಲ ಉಂಟುಮಾಡುವುದು ತಪ್ಪು ಎಂಬ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Shobha Karndlaje rubbishes Sriramulu next CM statment

ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಶಿವಮೊಗ್ಗ, ಬಳ್ಳಾರಿ, ಜಮಖಂಡಿಯಲ್ಲಿ ಬಿಜೆಪಿ ಗೆಲುವು ಖಾಯಂ ಎಂದು ಹೇಳಿದರು.

ರೆಡ್ಡಿ ಸಹೋದರರು ನನ್ನ ಮೇಲೆ ಗೂಂಡಾಗಳನ್ನು ಬಿಟ್ಟಿದ್ದರು: ಸಿದ್ದರಾಮಯ್ಯ ರೆಡ್ಡಿ ಸಹೋದರರು ನನ್ನ ಮೇಲೆ ಗೂಂಡಾಗಳನ್ನು ಬಿಟ್ಟಿದ್ದರು: ಸಿದ್ದರಾಮಯ್ಯ

ಉಪಚುನಾವಣೆ ಬಳಿಕ ಬಿಜೆಪಿ ಶಾಸಕರ ಸಂಖ್ಯಾಬಲ 105ಕ್ಕೆ ಏರುತ್ತದೆ. ಆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳು ನಡೆಯುತ್ತವೆ ಎಂದ ಅವರು, ಆಪರೇಷನ್ ಕಮಲ ಮಾಡದಂತೆ ಬಿಜೆಪಿ ನಿರ್ಣಯಿಸಿದೆ ಎಂದು ಹೇಳಿದರು.

English summary
BJP leader Shoba Karandlaje said 'V.Somanna's statement of 'Sriramulu is our next CM' is not a good statement. Yeddyurappa is our leader he is only the CM candidate'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X