ಲಿಂಗಾಯತ ಧರ್ಮದ ವಿಚಾರದಲ್ಲಿ ನಮಗೆ ಹಿನ್ನಡೆ: ಸಿದ್ದರಾಮಯ್ಯ ಆತ್ಮಾವಲೋಕನ
ಗದಗ, ನವೆಂಬರ್ 12: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಅಂದು ತೆಗೆದುಕೊಂಡ ನಿರ್ಣಯ ಸರಿಯಾಗಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ಆತ್ಮಾವಲೋಕನ ಮಾಡಿಕೊಂಡಿದ್ದಾರೆ.
ಗದಗದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತ್ಯೇಕ ಧರ್ಮದ ವಿಚಾರದಲ್ಲಿ ತೆಗೆದುಕೊಂಡ ನಿರ್ಧಾರದಿಂದ ಕಾಂಗ್ರೆಸ್ ಪಕ್ಷ ಸಾಕಷ್ಟು ತೊಂದರೆ ಅನುಭವಿಸಿದೆ ಇದನ್ನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದರು.
ಆದರೆ ಆದದ್ದು ಆಯಿತು ಇನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಧರ್ಮ ವಿಷಯದಲ್ಲಿ ಸರ್ಕಾರ ಕೈಹಾಕಿ ಹಿನ್ನೆಡೆ ಅನುಭವಿಸಿತು ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಸ್ವಾರ್ಥಕ್ಕಾಗಿ ಮತಕ್ಕಾಗಿ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಧರ್ಮ ಒಡೆದರು ಎಂದು ನನ್ನನ್ನು ಹಿಂಜರಿಯುತ್ತಿದ್ದಾರೆ ನಾನು ಮಾಡಿದ ತಪ್ಪಾದರೂ ಏನು ಸ್ವಾಮಿಗಳೇ ಎಂದು ಸ್ವಾಮೀಜಿಯನ್ನು ಪ್ರಶ್ನಿಸಿದರು.
ವಿಜಯಪುರ ಮಹಿಳಾ ವಿವಿಗೆ ಅಕ್ಕಮಹಾದೇವಿ ಹೆಸರಿಟ್ಟ ಹಿನ್ನೆಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ವೀರಶೈವ ಲಿಂಗಾಯತ ಮಹಾಸಭಾದವರು ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ಮಾಡಬೇಕು ಎಂದು ಅರ್ಜಿ ಸಲ್ಲಿಸಿದರು.











Click it and Unblock the Notifications