• search
 • Live TV
ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗದಗದಲ್ಲಿ ನಿಷೇಧಾಜ್ಞೆ ಜಾರಿ; ಕೆಲವೊಂದು ವಿನಾಯಿತಿ

|

ಗದಗ, ಜುಲೈ 16 : ಗದಗ ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ, ಜಿಲ್ಲಾಡಳಿತ ಕೆಲವೊಂದು ಸಡಿಲಿಕೆಗಳ ಜೊತೆ ನಿಷೇಧಾಜ್ಞೆಯನ್ನು ಜಾರಿಗೊಳಿ ಆದೇಶ ಹೊರಡಿಸಿದೆ.

   Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada

   ಗದಗ ಜಿಲ್ಲಯಲ್ಲಿ ಗುರುವಾರ 44 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 414ಕ್ಕೆ ಏರಿಕೆಯಾಗಿದೆ. ಸೋಂಕು ಹರಡದಂತೆ ಎಚ್ಚರವಹಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

   ಕೊರೊನಾ ವೈರಸ್: ಗದಗ ಜನರಿಗೆ ಶುಭ ಸುದ್ದಿ!

   "ಜುಲೈ 17ರ ರಾತ್ರಿ 8 ಗಂಟೆಯಿಂದ ಜುಲೈ 27ರ ಬೆಳಗ್ಗೆ 5 ಗಂಟೆಯವರೆಗೆ ಕೆಲವೊಂದು ಸಡಲಿಕೆಗಳ ಜೊತೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ" ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಹೇಳಿದ್ದಾರೆ.

   ಗದಗ-ವಾಡಿ ರೈಲು ಮಾರ್ಗದ ಅಡೆ-ತಡೆ ನಿವಾರಣೆ; ಯೋಜನೆಗೆ ಒಪ್ಪಿಗೆ

   ಜಿಲ್ಲಾಡಳಿತದ ಆದೇಶದ ಪ್ರಕಾರ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಬಳಕೆಯ ದಿನಸಿ, ತರಕಾರಿ, ಹಣ್ಣು ಹಾಗೂ ಅತ್ಯವಶ್ಯಕ ವಸ್ತುಗಳನ್ನು ಖರೀದಿ ಮಾಡಲು ಅವಕಾಶವಿದೆ. ಬಳಿಕ ಅಂಗಡಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ.

   ಗದಗ ಬಸ್ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರಿಡಬೇಕೆಂದು ಒತ್ತಾಯ

   ಕೃಷಿ ಚಟುವಟಿಕೆಗಳು, ಉದ್ಯೋಗ ಖಾತ್ರಿ ಕೆಲಸ, ತುರ್ತು ಸೇವೆಗಳಿಗೆ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ. 65 ವರ್ಷದ ಮೇಲ್ಪಟ್ಟ ಹಿರಿಯ ನಾಗರಿಕರು, 10 ವರ್ಷದೊಳಗಿನ ಮಕ್ಕಳು. ಗರ್ಭಿಣಿಯರು ಆರೋಗ್ಯ, ಅವಶ್ಯಕ ಪೂರೈಕೆಗಳಂತಹ ಅನಿವಾರ್ಯ ಕಾರಣ ಹೊರತು ಕಡ್ಡಾಯವಾಗಿ ಮನೆಯಲ್ಲಿಯೇ ಇರುವಂತೆ ಮನವಿ ಮಾಡಲಾಗಿದೆ.

   ಯಾವುದೇ ಸಭೆ, ಸಮಾರಂಭ, ಸಂತೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಮೊದಲು ನಿಶ್ಚಯಿಸಿದ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆದು ವಿವಾಹ ಕಾರ್ಯಕ್ರಮ ಮಾಡಬಹುದು. ಆದರೆ, ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ.

   ವ್ಯಕ್ತಿಗಳು ಮತ್ತು ಸರಕುಗಳ ಅಂತರ ರಾಜ್ಯ ಮತ್ತು ಅಂತರ ಜಿಲ್ಲೆ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಸಂಚಾರ ನಡೆಸಲು ಯಾವುದೇ ಪಾಸುಗಳನ್ನು ಪಡೆಯುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

   English summary
   After the rising of Coronavirus cases Gadag district administration fixed the time for commercial activities. Stall can open from morning 5 am to 2 pm.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X