Pawan Munjal: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್ ಕಚೇರಿ, ನಿವಾಸದ ಮೇಲೆ ಐಟಿ ದಾಳಿ
ಗುರುಗ್ರಾಮ, ಮಾರ್ಚ್ 23: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬುಧವಾರ ಮುಂಜಾನೆ ಪವನ್ ಮುಂಜಾಲ್ ಅವರ ಗುರುಗ್ರಾಮದಲ್ಲಿರುವ ಕಚೇರಿ ಹಾಗೂ ನಿವಾಸದ ಮೇಲೆ ಐಟಿ ಇಲಾಖೆ ದಾಳಿ ನಡೆಸಿದೆ. ಐಟಿ ಅಧಿಕಾರಿಗಳು ಕಂಪನಿಗೆ ಸಂಬಂಧಿಸಿದ ದಾಖಲೆಗಳ ಹುಡುಕಾಟ ನಡೆಸುತ್ತಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಪವನ್ ಮುಂಜಾಲ್ ದ್ವಿಚಕ್ರ ವಾಹನ ತಯಾರಿಕಾ ಕಂಪನಿ ಹೀರೋ ಮೋಟೋಕಾರ್ಪ್‌ನ ಅಧ್ಯಕ್ಷರಾಗಿದ್ದು ಏಷ್ಯಾ, ಆಫ್ರಿಕಾ, ದಕ್ಷಿಣ ಅಮೆರಿಕ ಹಾಗೂ ಮಧ್ಯ ಅಮೆರಿಕದ 40 ದೇಶಗಳಲ್ಲಿ ವಹಿವಾಟು ನಡೆಸುತ್ತಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೀರೋ ಮೋಟೋಕಾರ್ಪ್ ಆವರಣದ ಜೊತೆಗೆ ದೆಹಲಿ-ಎನ್‌ಸಿಆರ್‌ನ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದೆ. ದೇಶದ ಅತಿದೊಡ್ಡ ದ್ವಿಚಕ್ರ ವಾಹನ ಕಂಪನಿಯ ವಿರುದ್ಧ ತೆರಿಗೆ ವಂಚನೆ ತನಿಖೆಯ ಭಾಗವಾಗಿ ಪ್ರವರ್ತಕ ಪವನ್ ಮುಂಜಾಲ್ ಅವರ ಕಚೇರಿ ಮತ್ತು ನಿವಾಸ ಮತ್ತು ಕಂಪನಿಯ ಉನ್ನತ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ ಆವರಣಗಳು ಈ ಹುಡುಕಾಟದಲ್ಲಿ ಒಳಗೊಂಡಿವೆ.

ಇಲಾಖೆಯ ಅಧಿಕಾರಿಗಳ ತಂಡವು ಕಂಪನಿ ಮತ್ತು ಪ್ರವರ್ತಕರ ಹಣಕಾಸು ದಾಖಲೆಗಳು ಮತ್ತು ಇತರ ವ್ಯವಹಾರ ವಹಿವಾಟುಗಳನ್ನು ಪರಿಶೀಲಿಸುತ್ತಿದೆ.












Click it and Unblock the Notifications