Video: ಉತ್ತರ ದೆಹಲಿಯಲ್ಲಿ ಒಂದೇ ದಿನ ಮೂರು ಕಡೆ ಅಗ್ನಿ ಅವಘಡ
ನವದೆಹಲಿ, ಏಪ್ರಿಲ್ 27: ಉತ್ತರ ದೆಹಲಿಯ ಭಾಲ್ಸ್ವಾ ಸ್ಥಳದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರದಂದು ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳಕ್ಕೆ ಸಂಜೆ 5.47ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು ಎಂದು ಹೇಳಿದ್ದಾರೆ.
ರಾತ್ರಿಯಿಡೀ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪ್ರಸ್ತುತ 13 ಅಗ್ನಿಶಾಮಕ ವಾಹನಗಳ ಸಿಬ್ಬಂದಿಯು ಸ್ಥಳದಲ್ಲಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾಲ್ಸ್ವಾ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಹೊತ್ತಿಕೊಂಡಿರುವುದರ ಬಗ್ಗೆ ಮುಂದಿನ 24 ಗಂಟೆಗಳಲ್ಲಿ ವರದಿ ಸಲ್ಲಿಸುವಂತೆ ಪರಿಸರ ಸಚಿವ ಗೋಪಾಲ್ ರೈ ಮಂಗಳವಾರ ದಿಲ್ಲಿ ಮಾಲಿನ್ಯ ನಿಯಂತ್ರಣ ಸಮಿತಿಗೆ (ಡಿಪಿಸಿಸಿ) ಸೂಚನೆ ನೀಡಿದ್ದಾರೆ. ಈ ವರ್ಷ, ಪೂರ್ವ ದೆಹಲಿಯ ಗಾಜಿಪುರ ಸ್ಥಳದಲ್ಲಿ ಮೂರು ಬೆಂಕಿಯ ಕಾಣಿಸಿಕೊಂಡಿರುವ ಘಟನೆ ನಡೆದಿತ್ತು. ಕಳೆದ ಮಾರ್ಚ್ 28 ರಂದು ಅಗ್ನಿ ಅವಘಡ ನಡೆದಿದ್ದು, 50 ಗಂಟೆಗಳ ನಿರಂತರ ಕಾರ್ಯಾಚರಣೆ ನಂತರದಲ್ಲಿ ಬೆಂಕಿ ನಂದಿಸಲಾಗಿತ್ತು.
#WATCH | Delhi: Massive fire breaks out at Bhalaswa dump yard; 10 fire tenders present at the spot. Details awaited. pic.twitter.com/H02lv6qseV
— ANI (@ANI) April 26, 2022
ಉಸಿರಾಡುವುದಕ್ಕೂ ಆಗುತ್ತಿಲ್ಲ ಎಂದ ಸ್ಥಳೀಯರು:
ಭಾಲ್ಸ್ವಾ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದರ ಹೊಗೆ ಆಕಾಶದೆತ್ತರಕ್ಕೆ ಹರಡಿಕೊಳ್ಳುತ್ತಿದೆ. ನಮಗೆ ಸರಿಯಾಗಿ ಏನೂ ಕಾಣುತ್ತಿಲ್ಲ, ಉಸಿರಾಡುವುದಕ್ಕೂ ಆಗುತ್ತಿಲ್ಲ. ಇಲ್ಲಿನ ಡಂಪ್ ಯಾರ್ಡ್‌ನ ಪರಿಸ್ಥಿತಿಯ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ದೆಹಲಿಯಲ್ಲಿ ಒಂದೇ ದಿನ ಮೂರು ಕಡೆ ಅಗ್ನಿ ಅವಘಡ:
ರಾಜಧಾನಿ ದೆಹಲಿಯಲ್ಲಿ ಮಂಗಳವಾರವೊಂದೇ ದಿನ ಮೂರು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆಗಳು ವರದಿಯಾಗಿವೆ. ನಗರದ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿರುವ ಸಾರಿಗೆ ಭವನದಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಕೊಠಡಿಯೊಂದರಲ್ಲಿ ಹವಾನಿಯಂತ್ರಣದಿಂದ ಬೆಂಕಿ ಕಾಣಿಸಿಕೊಂಡಿತ್ತು. ಮತ್ತೊಂದು ಘಟನೆಯಲ್ಲಿ, ಲಜಪತ್ ನಗರದ ಅಮರ್ ಕಾಲೋನಿಯ ಮುಖ್ಯ ಮಾರುಕಟ್ಟೆಯಲ್ಲಿ ಅಂಗಡಿಯೊಂದಕ್ಕೆ ಬೆಂಕಿ ಕಾಣಿಸಿಕೊಂಡು ಇತರ ಅಂಗಡಿಗಳಿಗೆ ವ್ಯಾಪಿಸಿತ್ತು.

ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗಾರ್ಗ್ ಅವರು, "ನೆಲ ಮಹಡಿಯಲ್ಲಿರುವ ಅಂಗಡಿಯಿಂದ ಬೆಂಕಿ ಕಾಣಿಸಿಕೊಂಡು ಇತರ ಅಂಗಡಿಗಳು ಮತ್ತು ರೆಸ್ಟೋರೆಂಟ್‌ಗೆ ವ್ಯಾಪಿಸಿದೆ. ಕಟ್ಟಡದ ಮೊದಲ ಮಹಡಿಯಲ್ಲಿರುವ ನಿವಾಸ ಮತ್ತು ಕಚೇರಿಗೂ ಬೆಂಕಿ ವ್ಯಾಪಿಸಿದೆ" ಎಂದು ಹೇಳಿದ್ದಾರೆ. ದೆಹಲಿಯ ವಿಕಾಸ್ ಮಾರ್ಗ್ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಡಿಟಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು.
ಗುರುಗ್ರಾಮ್‌ನ ಮನೇಸರ್‌ನಲ್ಲಿನ ಕಸದ ರಾಶಿಯಲ್ಲಿ ಬೆಂಕಿ:
ಗುರುಗ್ರಾಮ್‌ನ ಮನೇಸರ್‌ನಲ್ಲಿನ ಕಸದ ರಾಶಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸೋಮವಾರ ತಡರಾತ್ರಿ ಹೊತ್ತಿಕೊಂಡ ಬೆಂಕಿ, ನೋಡನೋಡುತ್ತಿದ್ದಂತ ಧಗಧಗಿಸಿ ಉರಿಯಲು ಆರಂಭಿಸಿದೆ. ಮನೇಸರ್‌ನ ಸೆಕ್ಟರ್-6 ಬಳಿ ಬೆಂಕಿ ಹೊತ್ತಿಕೊಂಡಿರುವ ಈ ಘಟನೆ ನಡೆದಿದೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ 35ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications