ಗುರುಗ್ರಾಮ ಕಟ್ಟಡ ಕುಸಿತ: 2 ಶವ ಪತ್ತೆ, ನಾಲ್ಕು ಕುಟುಂಬ ಸಿಲುಕಿರುವ ಶಂಕೆ
ಗುರುಗ್ರಾಮ, ಫೆಬ್ರವರಿ 10: ಬಹುಮಹಡಿ ವಸತಿ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದು, ಇಬ್ಬರು ಮೃತಪಟ್ಟಿದ್ದು, ಹಲವಾರು ಜನರು ಸಿಕ್ಕಿಬಿದ್ದ ಘಟನೆ ಗುರುಗ್ರಾಮ(ಗುರ್‌ಗಾಂವ್)ದ ಸೆಕ್ಟರ್ 109 ರಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅಥವಾ ಎನ್‌ಡಿಆರ್‌ಎಫ್ ತಂಡವು ಚಿಂಟೆಲ್ಸ್ ಪ್ಯಾರಾಡಿಸೊ ವಸತಿ ಸ್ಥಳವನ್ನು ತಲುಪಿದ್ದು ಸಿಕ್ಕಿಬಿದ್ದಿರುವ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತವಾಗಿವೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ರಕ್ಷಣಾ ಕಾರ್ಯಚರಣೆಯ ದೃಶ್ಯಗಳು ವೈರಲ್ ಆಗಿದ್ದು, ಕಿತ್ತಳೆ ಬಣ್ಣದ ಜಾಕೆಟ್‌ಗಳನ್ನು ಧರಿಸಿದ ರಕ್ಷಕರು ಕಟ್ಟಡದ ಮೇಲಿನ ಮಹಡಿಗಳಿಗೆ ತಲುಪಲು ಏಣಿಯನ್ನು ಸ್ಥಾಪಿಸುವುದನ್ನು ದೃಶ್ಯಗಳು ತೋರಿಸುತ್ತವೆ.
"ಆರನೇ ಮಹಡಿಯಿಂದ ಮೊದಲ ಮಹಡಿಯವರೆಗಿನ ಡ್ರಾಯಿಂಗ್ ರೂಮ್ ಕುಸಿದಿದೆ. ಇದರಿಂದಾಗಿ ಇನ್ನೂ ಕೆಲ ಮಹಡಿ ಕುಸಿದಿದೆ" ಎಂದು ಕಟ್ಟಡದ ನಿವಾಸಿ ಕೌಶಲ್ ಕುಮಾರ್ ಎಎನ್‌ಐಗೆ ತಿಳಿಸಿದರು, ಈ ಘಟನೆಯು ಎತ್ತರದ "ಟವರ್ ಡಿ" ನಲ್ಲಿ ಸಂಭವಿಸಿದೆ ಎಂದು ಹೇಳಿದರು.ಆರು ಫ್ಲಾಟ್‌ಗಳನ್ನು ಹೊಂದಿರುವ ಪೀಡಿತ ಮಹಡಿಯಲ್ಲಿ ನಾಲ್ಕು ಕುಟುಂಬಗಳು ವಾಸಿಸುತ್ತಿದ್ದವು ಎಂದು ಸ್ಥಳೀಯ ಕುಮಾರ್ ಹೇಳಿದರು.

Administrative officials, along with SDRF and NDRF teams are busy in the rescue & relief work after the unfortunate collapse of the apartment roof at the Paradiso Housing Complex in Gurugram. I am personally monitoring the situation and I pray for everyone's safety. pic.twitter.com/T6NdEtpIgm
— Manohar Lal (@mlkhattar) February 10, 2022
"ಗುರುಗ್ರಾಮ್‌ನ ಪ್ಯಾರಾಡಿಸೊ ವಸತಿ ಸಂಕೀರ್ಣದಲ್ಲಿ ಅಪಾರ್ಟ್‌ಮೆಂಟ್ ಮೇಲ್ಛಾವಣಿ ಕುಸಿತ ದುರದೃಷ್ಟಕರ. ಆಡಳಿತ ಅಧಿಕಾರಿಗಳು, ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ನಿರತವಾಗಿವೆ. ನಾನು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ಪ್ರತಿಯೊಬ್ಬರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ" ಎಂದು ಮನೋಹರ್ ಲಾಲ್ ಖಟ್ಟರ್ ಟ್ವೀಟ್ ಮಾಡಿದ್ದಾರೆ. ಮೇಲ್ಛಾವಣಿ ಕುಸಿತಕ್ಕೆ ತಕ್ಷಣಕ್ಕೆ ಕಾರಣ ತಿಳಿದುಬಂದಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications