ಅಸ್ಸಾಂನಲ್ಲಿ ಗ್ರೆನೇಡ್ ಸ್ಫೋಟ,ರೆಡ್ ಅಲರ್ಟ್ ಘೋಷಣೆ
ಗುವಾಹಟಿ, ಮೇ 16: ಅಸ್ಸಾಂನ ಗುವಾಹಟಿಯಲ್ಲಿ ಬುಧವಾರ ಸಂಜೆ ಸಂಭವಿಸಿದ ಗ್ರೆನೇಡ್ ಸ್ಫೋಟದಲ್ಲಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಅವರನ್ನು ಗುವಾಹಟಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಝೂ ರಸ್ತೆಯಲ್ಲಿರುವ ಮಾಲ್ ಒಂದರ ಎದುರು ಗ್ರನೇಡ್ ಸ್ಫೋಟಗೊಂಡಿದೆ.
ಸದ್ಯ ಘಟನಾ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಹಾಗೂ ಪೊಲೀಸ್ ಕಮಿಷನರ್ ದೀಪಕ್ ಕುಮಾರ್ ಭೇಟಿ ನೀಡಿದ್ದಾರೆ. 8 ಗಂಟೆ ಸುಮಾರಿಗೆ ಸ್ಫೋಟಗೊಂಡಿದೆ ಎನ್ನಲಾಗಿದ್ದು ಪೊಲೀಸ್ ಅಧಿಕಾರಿಗಳು ತನಿಖೆಯನ್ನ ಮುಂದುವರಿಸಿದ್ದಾರೆ. ಅದರಲ್ಲಿ ಇಬ್ಬರು ಯೋಧರು ಕೂಡ ಗಾಯಗೊಂಡಿದ್ದಾರೆ. ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಈ ಹಿಂದೆ ಲಭ್ಯವಾಗಿತ್ತು ಆದರೆ ಸಾವು ಸಂಭವಿಸಿಲ್ಲ ಎಂದು ವರದಿಯಿಂದ ತಿಳಿದುಬಂದಿದೆ.












Click it and Unblock the Notifications