• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಸ್ಸಾಂನ 22 ಜಿಲ್ಲೆಯಲ್ಲಿ ಭಾರಿ ಪ್ರವಾಹ: ಸಾವಿನ ಸಂಖ್ಯೆ 34ಕ್ಕೆ ಏರಿಕೆ

|
Google Oneindia Kannada News

ಗುವಾಹಟಿ, ಜುಲೈ 3: ಅಸ್ಸಾಂನ 22 ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಸಂಭವಿಸಿದೆ, ಮೃತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ನೆರೆಯ ಹಿನ್ನೆಲೆಯಲ್ಲಿ ಸುಮಾರು 12,597 ಮಂದಿ ಸೂರು ಕಳೆದುಕೊಂಡಿದ್ದಾರೆ. ಒಟ್ಟು 163 ನಿರಾಶ್ರಿತರ ಶಿಬಿರಗಳನ್ನು ತೆರೆಯಲಾಗಿದೆ. ಪ್ರವಾಹದಿಂದ 16,03,255 ಮಂದಿ ಬಾಧಿತರಾಗಿದ್ದಾರೆ. ನೆರೆಯಿಂದ ಸಾವಿಗೀಡಾದವರ ಸಂಖ್ಯೆ 34ಕ್ಕೆ ತಲುಪಿದೆ.

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 16ಕ್ಕೆ ಏರಿಕೆ ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಬ್ರಹ್ಮಪುತ್ರ ನದಿ ಪಾತ್ರದಲ್ಲಿ ಅಪಾಯಮಟ್ಟ ಮೀರಿ ನೀರು ಹರಿಯುತ್ತಿದ್ದರೂ ಕೂಡ ಸರ್ಕಾರದ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಈ ಸಂದರ್ಭದಲ್ಲಿ ಸರ್ಕಾರವು ನಮಗೆ ಬೇಕಾದ ಸಹಾಯ ಮಾಡಬೇಕು, ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು, ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಅಸ್ಸಾಂನಲ್ಲಿ ಉಂಟಾದ ಭೂಕುಸಿತದಿಂದ ಮಕ್ಕಳು ಸೇರಿದಂತೆ 20 ಮಂದಿ ಜನರು ಸಾವನ್ನಪ್ಪಿದ್ದಾರೆ. ಕಛಾರ್ ಜಿಲ್ಲೆಯ ಕೋಲಾಪುರ್ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಧೆಮಾಜಿ ಹೆಚ್ಚು ಬಾಧಿತ ಜಿಲ್ಲೆಯಾಗಿದ್ದು, ಇದರ ನಂತರ ಟಿನ್ಸುಕಿಯಾ, ಮಜುಲಿ ಮತ್ತು ದಿಬ್ರುಗಢ್ ಕೂಡ ಪ್ರವಾಹದ ಪರಿಣಾಮ ಎದುರಿಸುತ್ತಿವೆ.

English summary
The flood in Assam spread to 22 of the 33 districts affecting over 16.03 lakh people and claiming the life of one more person, taking the toll in the deluge and related incidents to 34 on Thursday, the Assam State Disaster Management Authority (ASDMA) said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X