ಅಸ್ಸಾಂನ ಈಶಾನ್ಯ ಭಾಗದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ
ಗುವಾಹಟಿ, ಏಪ್ರಿಲ್ 28: ಅಸ್ಸಾಂನ ಗುವಾಹಟಿ ಸೇರಿದಂತೆ ಈಶಾನ್ಯ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪ ದಾಖಲಾಗಿದೆ. ಅಸ್ಸಾಂನ ಸೋನಿತ್ಪುರ ಭೂಕಂಪದ ಕೇಂದ್ರ ಬಿಂದು ಎಂದು ಹೇಳಲಾಗಿದೆ.
ಕಂಪನದ ಅನುಭವ ಆಗುತ್ತಿದ್ದಂತೆ ಭಯಗೊಂಡ ಜನ ಮನೆಯಿಂದ ಹೊರಗೆ ಬಂದಿದ್ದಾರೆ.ಭೂಕಂಪದತೀವ್ರತೆಯಿಂದ ಹಲವು ಕಟ್ಟಡಗಳು ಬಿರುಕುಬಿಟ್ಟಿವೆ, ಇಂದು ಬೆಳಗ್ಗೆ 7.45ಕ್ಕೆ ಅಸ್ಸಾಂನ ಗುವಾಹಟಿ ಸೇರಿದಂತೆ ಈಶಾನ್ಯ ಭಾಗದಲ್ಲಿ ಭೂಕಂಪ ಸಂಭವಿಸಿದೆ.

ಅಸ್ಸಾಂನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ, ವಿವರಗಳು ಇನ್ನೂ ದೊರೆಯಬೇಕಿದೆ ಅದಕ್ಕಾಗಿ ಕಾಯುತ್ತಿದ್ದೇನೆ ಎಂದು ಅಸ್ಸಾಂನ ಆರೋಗ್ಯ ಸಚಿವ ಹಮಂತ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದಾರೆ.












Click it and Unblock the Notifications