• search
  • Live TV
ಗುವಾಹಾಟಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಅಸ್ಸಾಂನಲ್ಲಿ ಕಾಂಗ್ರೆಸ್‌ನ 8 ಶಾಸಕರು ಬಿಜೆಪಿಗೆ

|
Google Oneindia Kannada News

ಗುವಾಹಟಿ, ಆಗಸ್ಟ್ 08: ಪ್ರತಿಪಕ್ಷ ಕಾಂಗ್ರೆಸ್‌ನ ಎಂಟು ಶಾಸಕರು ಒಂದು ತಿಂಗಳೊಳಗೆ ಆಡಳಿತ ಪಕ್ಷಕ್ಕೆ ಸೇರಲಿದ್ದಾರೆ ಎಂದು ಅಸ್ಸಾಂನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕರೊಬ್ಬರು ಸೋಮವಾರ ಹೇಳಿದ್ದಾರೆ.

ಅಸ್ಸಾಂನ ದಿಬ್ರುಗಢ್ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಪ್ರಶಾಂತ ಫುಕನ್, ಎಂಟು ಮಂದಿ ಬಿಜೆಪಿಗೆ ಸೇರುವ ಬಗ್ಗೆ ಮಾತುಕತೆಗಳಾಗುತ್ತಿವೆ ಎಂದು ಮಾಹಿತಿ ನೀಡಿದರು.

"ಕಾಂಗ್ರೆಸ್ ಪಕ್ಷವನ್ನು ಉತ್ತೇಜಿಸುವ ಉದ್ದೇಶದಿಂದ ಬಿಜೆಪಿ ಶಾಸಕರ ಕ್ಷೇತ್ರಗಳಲ್ಲಿ ಯಾತ್ರೆ ಕಾರ್ಯಕ್ರಮವನ್ನು ಯೋಜಿಸುತ್ತಿದೆ ಎಂದು ನಾನು ಕೇಳಿದ್ದೇನೆ. ಅವರ ಎಂಟು ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವಾಗ ಇಂತಹ ಕಸರತ್ತಿನ ಅರ್ಥವೇನು? "ಎಂದು ಪ್ರಶಾಂತ್ ಫುಕನ್ ಪ್ರಶ್ನಿಸಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿರುವ ಪ್ರಶಾಂತ್ ಪುಕನ್, ಕಾಂಗ್ರೆಸ್ ಶಾಸಕರು ಪಕ್ಷಕ್ಕೆ ಹಾಗೂ ವಿಧಾನಸಭೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಲಿದ್ದಾರೆ. ಆರಂಭದಲ್ಲಿ ಒಂಬತ್ತು ಕಾಂಗ್ರೆಸ್ ಶಾಸಕರು ಬಿಜಿಪಿಗೆ ಸೇರ್ಪಡೆಗೊಳ್ಳಲು ಚರ್ಚೆ ಮಾಡಿದ್ದರು. ಆದರೆ, ನಂತರ ಒಬ್ಬರಿಗೆ ಅವಕಾಶ ಕಲ್ಪಿಸಲು ಸಾಧ್ಯವಾಗದ ಕಾರಣ ಸಂಖ್ಯೆ ಎಂಟಕ್ಕೆ ಇಳಿಯಿತು' ಎಂದರು.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಪ್ರಸ್ತುತ ಕಾಂಗ್ರೆಸ್ 27 ಮತ್ತು ಬಿಜೆಪಿ 63 ಶಾಸಕರನ್ನು ಹೊಂದಿದೆ.

ಈ ಹೇಳಿಕೆಯನ್ನು ಕಾಂಗ್ರೆಸ್ ತಳ್ಳಿಹಾಕಿದೆ. "ನಾನು ಈ ಸುಳ್ಳು ಸುದ್ದಿಗಳ ಬಗ್ಗೆ ಮಾತನಾಡಲು ಹಿಂಜರಿಯುತ್ತೇನೆ. ರಾಜ್ಯದ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಸೇರಿದಂತೆ ಬಿಜೆಪಿ ನಾಯಕರು ಮತ್ತು ಸಚಿವರು ಇಂತಹ ಸುಳ್ಳುವಿಷಯಗಳನ್ನು ಹರಡುವಲ್ಲಿ ಪರಿಣತರಾಗಿದ್ದಾರೆ" ಎಂದು ಕಾಂಗ್ರೆಸ್ ಶಾಸಕ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸಾಕಿಯಾ ಹೇಳಿದರು.

ಕಳೆದ ವರ್ಷ, ಇಬ್ಬರು ಕಾಂಗ್ರೆಸ್ ಶಾಸಕರಾದ ರೂಪಜ್ಯೋತಿ ಕುರ್ಮಿ ​​(ಮರಿಯಾನಿ) ಮತ್ತು ಸುಶಾಂತ ಬೋರ್ಗೊಹೈನ್ (ಥಾವ್ರಾ) ಮತ್ತು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್)ನ ಫಣಿಧರ್ ತಾಲೂಕ್ದಾರ್ (ಭಬಾನಿಪುರ) ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ಮೂವರೂ ನಂತರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಗೆದ್ದಿದ್ದಾರೆ.

English summary
Assam senior BJP leader Prasanta Phukan claimed that eight legislators from the opposition Congress will join the ruling party BJP within a month. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X