ಅಸ್ಸಾಂ ವಿಧಾನಸಭೆ ಚುನಾವಣೆ: ಬಿಜೆಪಿಯಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಗುವಾಹಟಿ, ಮಾರ್ಚ್‌ 10: ಅಸ್ಸಾಂ ವಿಧಾನಸಭೆ ಚುನಾವಣೆಗೆ ಬಿಜೆಪಿಯು 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರು ಹಾಗೂ ಬಿಜೆಪಿಯ ಹಿರಿಯ ಮುಖಂಡರು ಈ ಪಟ್ಟಿಯಲ್ಲಿದ್ದಾರೆ. ವಿಶೇಷವೆಂದರೆ ಕರ್ನಾಟಕದ ಬಿಜೆಪಿ ಮುಖಂಡ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಈ ಪಟ್ಟಿಯಲ್ಲಿದ್ದಾರೆ.

40 ಮುಖಂಡರ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಅಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಅರ್ಜುನ್ ಮುಂಡಾ, ನರೇಂದ್ರ ಸಿಂಗ್ ತೋಮರ್, ಸ್ಮೃತಿ ಇರಾನಿ, ಜೀತೇಂದ್ರ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ , ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೊನೊವಾಲ್, ಹಣಕಾಸು ಸಚಿವ ಹಿಮಂತ್ ಬಿಸ್ವ ಶರ್ಮಾ ಇದ್ದಾರೆ.

126 ಕ್ಷೇತ್ರಗಳ ಪೈಕಿ 47 ಕ್ಷೇತ್ರಗಳಿಗೆ ಮಾರ್ಚ್ 27ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 1ರಂದು 39 ಕ್ಷೇತ್ರಗಳಿಗೆ ಎರಡನೆಯ ಹಂತ ಹಾಗೂ ಉಳಿದ 40 ಸೀಟುಗಳಿಗೆ ಏಪ್ರಿಲ್ 6ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

Assam Assembly Election 2021: BJP Releases List Of Star Campaigner For Assam

ಈ ಬಾರಿ 11 ಶಾಸಕರನ್ನು ಬಿಜೆಪಿ ಮತ್ತೆ ಕಣಕ್ಕಿಳಿಸುತ್ತಿಲ್ಲ. ಅದರ ಪ್ರಾದೇಶಿಕ ಮಿತ್ರಪಕ್ಷ ಅಸೋಮ್ ಗಣ ಪರಿಷದ್ (ಎಜಿಪಿ), ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪ್ರಫುಲ್ಲಾ ಕುಮಾರ್ ಮಹಾಂತ ಅವರ ಬದಲು ಬರ್ಹಾಂಪುರ ಕ್ಷೇತ್ರದಲ್ಲಿ ಬಿಜೆಪಿಗೆ ಸ್ಪರ್ಧಿಸಲು ಅವಕಾಶ ನೀಡಿದೆ.

ಅಸ್ಸಾಂನಲ್ಲಿ 126 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಮತ್ತು ಎರಡನೆಯ ಹಂತಗಳಲ್ಲಿ ಸ್ಪರ್ಧಿಸಲಿರುವ ಒಟ್ಟು 70 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಹಿರಂಗಪಡಿಸಿದೆ.

ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರು ಮಜೌಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಆರೋಗ್ಯ ಸಚಿವ ಹಿಮಂತ್ ಬಿಸ್ವಾ ಶರ್ಮಾ, ಜಲುಕ್ಬರಿ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಹಿಮಂತ್ ಶರ್ಮಾ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇರಲಿಲ್ಲ. ಆದರೆ ಸೋನೊವಾಲ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸದೆ, ಸೋನೊವಾಲ್ ಮತ್ತು ಶರ್ಮಾ ಅವರ ಜಂಟಿ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+